ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ರದ್ದು ಮಾಡೋದು ಒಳ್ಳೆಯದು:ಶಾಸಕ ಬಾಲಕೃಷ್ಣ

Published 30 ಜನವರಿ 2024, 18:04 IST
Last Updated 30 ಜನವರಿ 2024, 18:04 IST
ಅಕ್ಷರ ಗಾತ್ರ

ಮಾಗಡಿ (ರಾಮನಗರ): ‘ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೂ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆಯದಿದ್ದರೆ ಗ್ಯಾರಂಟಿಗಳನ್ನು ರದ್ದು ಮಾಡುವುದೇ ಒಳ್ಳೆಯದು. ಈ ಕುರಿತು, ಮುಖ್ಯಮಂತ್ರಿ ಅವರಿಗೂ ಹೇಳಿದ್ದೇನೆ’ ಎಂದು ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಹೇಳಿದರು.

ತಾಲ್ಲೂಕಿನ ಶ್ರೀಗಿರಿಪುರದಲ್ಲಿ ಮಂಗಳವಾರ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ ಧರ್ಮ ರಾಜಕಾರಣದ ಮಂತ್ರಾಕ್ಷತೆ ಬೇಕೋ ಅಥವಾ ಜನಸಾಮಾನ್ಯರ ಜೀವನ ಬದಲಿಸುತ್ತಿರುವ ಕಾಂಗ್ರೆಸ್‌ನ ಗ್ಯಾರಂಟಿ ಬೇಕೊ ಎಂದು ಜನ ಈ ಚುನಾವಣೆಯಲ್ಲಿ ತೀರ್ಮಾನ ಮಾಡಬೇಕು’ ಎಂದರು.

‘ನಾವೆಲ್ಲರೂ ಹಿಂದೂಗಳು. ಆದರೆ, ದೇವರು ಮತ್ತು ದೇವಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡಿ ಮತ ಪಡೆಯೋದು ಸರಿಯಲ್ಲ. ಹಾಗಾಗಿ, ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಅವುಗಳ ಆಧಾರದ ಮೇಲೆಯೇ ಜನರ ಬಳಿ ಮತ ಕೇಳುತ್ತೇವೆ’ ಎಂದು ತಿಳಿಸಿದರು.

‘ಒಂದು ವೇಳೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವೇನಾದರೂ ಕಡಿಮೆ ಸ್ಥಾನ ಗಳಿಸಿದರೆ, ಜನ ಗ್ಯಾರಂಟಿಗಳನ್ನು ತಿರಸ್ಕರಿಸಿದ್ದಾರೆ ಎಂದರ್ಥ. ಆಗ, ಅವುಗಳನ್ನು ರದ್ದು ಮಾಡಿ ನಾವೂ ಅವರಂತೆ ಮಂದಿರದ ರಾಜಕಾರಣ ಮಾಡಬೇಕಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT