ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಕ್ಕಾಗಿ ಒಂದು ಸಮುದಾಯವನ್ನು ಓಲೈಸುವ ಅಗತ್ಯವಿಲ್ಲ: ಎಚ್.ಡಿ. ಕುಮಾರಸ್ವಾಮಿ

ಕಾಂಗ್ರೆಸ್ ಅಪಪ್ರಚಾರದ ಬಗ್ಗೆ ಮುಸ್ಲಿಮರು ಕಿವಿಗೊಡದೆ ಎಚ್ಚರಿಕೆ ವಹಿಸಲಿ
Published 1 ಅಕ್ಟೋಬರ್ 2023, 12:50 IST
Last Updated 1 ಅಕ್ಟೋಬರ್ 2023, 12:50 IST
ಅಕ್ಷರ ಗಾತ್ರ

ರಾಮನಗರ: ಮತಕ್ಕಾಗಿ ಒಂದು ಸಮುದಾಯವನ್ನು ಓಲೈಸುವ ಅಗತ್ಯವಿಲ್ಲ: ಮುಸ್ಲಿಮರ‌ ಕುರಿತು ನನಗಿರುವ ಬದ್ದತೆ ಕುರಿತು ಆ ಸಮುದಾಯದ ಬಂಧುಗಳಿಗೆ ಗೊತ್ತಿದೆ. ಈ ಬಗ್ಗೆ ಕಾಂಗ್ರೆಸ್ ನವರು ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಮುಸ್ಲಿಮರು ಕಿವಿಗೊಡದೆ ಎಚ್ಚರಿಕೆಯಿಂದ ಇರಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬಿಜೆಪಿ- ಜೆಡಿಎಸ್ ಮೈತ್ರಿ ಬೆನ್ನಲ್ಲೇ ಬಿಡದಿಯಲ್ಲಿರುವ ಎಚ್.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ, ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಭಾನುವಾರ ಪಕ್ಷದ ಶಾಸಕರು, ಪರಿಷತ ಸದಸ್ಯರು, ‌ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಕಳೆದ ಬಾರಿ ಮುಸ್ಲಿಮರಿಗೆ ಸಮಸ್ಯೆಯಾದಾಗ ಧ್ವನಿ ಎತ್ತಿ, ಅವರ ಪರವಾಗಿ ನಿಂತಿದ್ದು ನಾನು. ಹಾಗಾಗಿ, ಸಮುದಾಯದವರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಇಂದಿನ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ.

ಮುಂದಿನ ಒಂದು ತಿಂಗಳೊಳಗೆ 31 ಜಿಲ್ಲೆಗಳಲ್ಲೂ ಸಭೆ ಮಾಡಿ, ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಲಾಗುವುದು. ಮೈತ್ರಿಯಿಂದ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯಾಗುವುದಿಲ್ಲ. ಬಗ್ಗೆ ನಾನು ಭರವಸೆ ಕೊಡುತ್ತೇನೆ ಎಂದು ಅಭಯ ‌ನೀಡಿದರು.

ಬಿಜೆಪಿ ಜೊತೆಗಿನ ಹೊಂದಾಣಿಕೆಯಿಂದ ಯಾರ ರಾಜಕೀಯ ಭವಿಷ್ಯವನ್ನೂ ಹೊಸಕಿ ಹಾಕಲ್ಲ.‌ ಶಾಸಕ ಜಿ.ಟಿ. ದೇವೇಗೌಡ ಅವರ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ರಚಿಸಿ ಸಂಘಟನೆ ಮಾಡಲಾಗುವುದು. ಕಾಂಗ್ರೆಸ್ ನಾಯಕರು ನನ್ನ ಬಗ್ಗೆ ಏನು ಬೇಕಾದರೂ ಅವಹೇಳನ ಮಾಡಲಿ. ಅದಕ್ಕೆ ನನ್ನ ಕಾರ್ಯಕರ್ತರು ಮತ್ತು ನಾಡಿನ ಜನತೆ ಉತ್ತರ ಕೊಡ್ತಾರೆ. ಇನ್ಮುಂದೆ ಅವರ ಯಾವ ಟೀಕೆಗೂ ಉತ್ತರ ಕೊಡಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT