ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಶೇ 84.61 ರಷ್ಟು ಮತದಾನ

Published 28 ಏಪ್ರಿಲ್ 2024, 6:42 IST
Last Updated 28 ಏಪ್ರಿಲ್ 2024, 6:42 IST
ಅಕ್ಷರ ಗಾತ್ರ

ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶೇ 84.61 ರಷ್ಟು ಮತದಾನವಾಗಿದೆ ಎಂದು ತಾಲ್ಲೂಕು ಚುನಾವಣಾಧಿಕಾರಿ ವಿಶ್ವನಾಥ್ ತಿಳಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 1,11,577 ಪುರುಷ ಮತದಾರರು, 1,19,678 ಮಹಿಳಾ ಮತದಾರರು, 8 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,31,263 ಮಂದಿ ಮತದಾರರಿದ್ದಾರೆ.

95,770 ಪುರುಷರು, 99,898 ಮಹಿಳೆಯರು ಸೇರಿದಂತೆ ಒಟ್ಟು 1,95,670 ಮತದಾರರು ಮತ ಚಲಾಯಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮತಗಟ್ಟೆ ಸಂಖ್ಯೆ 49ರ ಕಳ್ಳಿಹೊಸೂರು ಮತಗಟ್ಟೆಯಲ್ಲಿ ತಾಲ್ಲೂಕಿನಲ್ಲಿಯೇ ಅತಿಹೆಚ್ಚು ಶೇ 95.77 ರಷ್ಟು ಮತದಾನವಾಗಿದೆ. ಮತಗಟ್ಟೆ ಸಂಖ್ಯೆ 79ರ ಸೇಂಟ್ ಜೋಸೆಫ್ ಶಾಲೆ ಕೊಠಡಿ ಸಂಖ್ಯೆ 2ರಲ್ಲಿ ಅತಿ ಕಡಿಮೆ ಶೇ 57.61 ರಷ್ಟು ಮತದಾನವಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT