ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂ.ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡುಗಳ ಹಂಚಿಕೆ: ಎಚ್‌ಡಿಕೆ

Published 26 ಏಪ್ರಿಲ್ 2024, 7:35 IST
Last Updated 26 ಏಪ್ರಿಲ್ 2024, 7:35 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ಗಿಫ್ಟ್ ಕಾರ್ಡುಗಳನ್ನು ಹಂಚಲಾಗಿದೆ ಎಂದು ಸಾಕ್ಷಿ ಸಮೇತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲ ಎಂದು ಕಿಡಿಕಾರಿದ್ದಾರೆ.

ಹಣ ಹಂಚಿಕೊಂಡು ಚುನಾವಣಾ ನಡೆಸಲು ಅವಕಾಶ ಮಾಡಿಕೊಟ್ಟುಬಿಡಿ ಎಂದು ಆಯೋಗದ ಮೇಲೆ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಕ್ಯೂ ಆರ್ ಕೋಡ್ ಇರುವ ಕೂಪನ್ ಗಳ ಹಂಚಿಕೆ ತಡೆಯಲು ಹೋದ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಕುಸುಮ ಹನುಮಂತಯ್ಯ, ಕುಣಿಗಲ್ ಶಾಸಕ ಡಾ.ರಂಗನಾಥ್, ಮಾಗಡಿ ಶಾಸಕ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಕೂಪನ್ ಕಾರ್ಡುಗಳ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT