ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಸುರೇಶ್ ನಾಮಪತ್ರ ಸಲ್ಲಿಕೆ ಇಂದು

ಮುಖ್ಯಮಂತ್ರಿ, ಉಪ ಮುಖ್ಯಂತ್ರಿ ಸೇರಿ ಸಚಿವರು, ಮುಖಂಡರು ಸಾಥ್
Published 28 ಮಾರ್ಚ್ 2024, 4:53 IST
Last Updated 28 ಮಾರ್ಚ್ 2024, 4:53 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಶಕ್ತಿ ಪ್ರದರ್ಶನಕ್ಕೆ ತಯಾರಿ ಮಾಡಿಕೊಂಡಿದ್ದು, ಕ್ಷೇತ್ರದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸುರೇಶ್ ಅವರ ಸಹೋದರರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಸಚಿವ ಜಿ. ಪರಮೇಶ್ವರ್ ಸೇರಿದಂತೆ ಹಲವು ಸಚಿವರು ಹಾಗೂ ನಾಯಕರು ಸುರೇಶ್ ಅವರು ನಾಮಪತ್ರ ಸಲ್ಲಿಸುವಾಗ ಸಾಥ್ ನೀಡಲಿದ್ದಾರೆ.

ನಾಮಪತ್ರ ಸಲ್ಲಿಸುವ ದಿನಾಂಕವನ್ನು ಪ್ರಕಟಿಸಿದ ಬೆನ್ನಲ್ಲೇ, ಸುರೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿವಿಧ ಮಠಾಧೀಶರ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಸಚಿವರು ಮತ್ತು ಸ್ಥಳೀಯ ನಾಯಕರನ್ನು ಸಹ ಭೇಟಿ ಮಾಡಿ, ನಾಮಪತ್ರ ಸಲ್ಲಿಸುವಾಗ ಜೊತೆಗಿರುವಂತೆ ಮನವಿ ಮಾಡಿದ್ದಾರೆ. ಕಾರ್ಯಕರ್ತರನ್ನು ಸೇರಿಸುವುದಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಸರಣಿ ಸಭೆಗಳು ನಡೆದಿವೆ.

ಬೆಳಿಗ್ಗೆ 9.30ಕ್ಕೆ ನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿರುವ ಸುರೇಶ್ ಅವರು, ನಂತರ ಪೀರಾನ್ ಷಾ ವಲಿ ದರ್ಗಾ ಹಾಗೂ ರೈಲು ನಿಲ್ದಾಣದ ಬಳಿ ಇರುವ ಲೂರ್ದ್ ಚರ್ಚ್‌ಗೆ ಭೇಟಿ ನೀಡಲಿದ್ದಾರೆ. ನಂತರ ಎಸ್‌.ಪಿ ಕಚೇರಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ‍್ಯಾಲಿಯಲ್ಲಿ ತೆರಳಿ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್ ತಿಳಿಸಿದ್ದಾರೆ.

ಬಳಿಕ ಹಳೆ ಚಾಮುಂಡೇಶ್ವರಿ ಕಾರ್ಖಾನೆಯಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗ್ರಾಮಾಂತರ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಿಂದಲೂ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT