ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ ಲೋಕ ಅದಾಲತ್ ಮಾರ್ಚ್ 9ಕ್ಕೆ

ಜಿಲ್ಲೆಯ ನ್ಯಾಯಾಲಯಗಳಲ್ಲಿ 52,347 ಪ್ರಕರಣಗಳು ಬಾಕಿ
Published 24 ಫೆಬ್ರುವರಿ 2024, 6:58 IST
Last Updated 24 ಫೆಬ್ರುವರಿ 2024, 6:58 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಮಾರ್ಚ್ 9ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಬಹುದು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ರಾಮನಗರ ಜಿಲ್ಲೆಯಾದ್ಯಂತ ಒಟ್ಟು 20 ಪೀಠಗಳಲ್ಲಿ ಅದಾಲತ್ ಆಯೋಜಿಸಲಾಗಿದೆ.

ಅದಾಲತ್‌ಗಾಗಿ ಮಾರ್ಚ್ 7ರವರೆಗೆ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ. ರಾಮನಗರ ಜಿಲ್ಲಾ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಕಲಾಪ ನಡೆಯಲಿದ್ದು, ವಕೀಲರು ಭಾಗವಹಿಸಬಹುದು. ಅಗತ್ಯವಿದ್ದರೆ ಕಕ್ಷಿದಾರರನ್ನು ಆನ್‌ಲೈನ್ ಮೂಲಕ ಸಂಪರ್ಕಿಸಲಾಗುವುದು.

ಜಿಲ್ಲೆಯಲ್ಲಿ ಒಟ್ಟು 52,347 ಪ್ರಕರಣಗಳು ಬಾಕಿ ಇವೆ. ಅವುಗಳ ಪೈಕಿ ರಾಜಿಯಾಗಬಹುದಾದ ಎಲ್ಲಾ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಕೈಗೆತ್ತಿಕೊಳ್ಳಲಾಗಿದೆ. ವಕೀಲರು ಖುದ್ದಾಗಿ ಹಾಗೂ ಆನ್‌ಲೈನ್ ಮೂಲಕ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ಅದಾಲತ್‌ಗೆ ಚಾಲನೆ ನೀಡಲಾಗಿದೆ.

ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ನೆಗೋಷಬಲ್ ಇನ್ಸ್ಟ್ರೂಮೆಂಟ್ ಕಾಯ್ದೆ (ಎನ್‌ಐ ಕಾಯ್ದೆ) ಪ್ರಕರಣಗಳು, ಸಾಲ ವಸೂಲಾತಿ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣ, ಕಾರ್ಮಿಕ ವಿವಾದ ಪ್ರಕರಣಗಳು, ಗಣಿ ಮತ್ತು ಭೂ ವಿಜ್ಞಾನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಆಸ್ತಿ ವಿಭಾಗ ಪ್ರಕರಣಗಳು, ನಿರ್ಧಿಷ್ಟ ಪ್ರಕರಣಗಳು, ಜಾರಿ ಪ್ರಕರಣಗಳು, ಹಕ್ಕು ಘೋಷಣೆ, ಶಾಶ್ವತ ನಿರ್ಬಂಧಕಾಜ್ಞೆ ಹಾಗೂ ಇತರೆ, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಲಘು ವ್ಯಾಜ್ಯ ಪ್ರಕರಣಗಳು, ಇತರ ಕ್ರಿಮಿನಲ್ ಪ್ರಕರಣಗಳು, ಭೂ ಸ್ವಾಧೀನ ಜಾರಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಅಧ್ಯಕ್ಷ ನಿಂಗಪ್ಪ ಪರಶುರಾಮ ಕೋಪರ್ಡೆ ತಿಳಿಸಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT