ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಲೋಕಾಯುಕ್ತ ಅದಾಲತ್ ಜುಲೈ 2ರಿಂದ

Last Updated 29 ಜೂನ್ 2022, 3:19 IST
ಅಕ್ಷರ ಗಾತ್ರ

ರಾಮನಗರ: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಉಪಸ್ಥಿತಿಯಲ್ಲಿ ಜುಲೈ 2ರಿಂದ 4 ರವರೆಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಈ ಅವಧಿಯಲ್ಲಿ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಸೌಲಭ್ಯ

ರಾಮನಗರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಕಾಯಕಕಿರಣ ಹಾಗೂ ಸ್ವಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 55 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ನಿಗಮದ ವೆಬ್‌ಸೈಟ್‌ನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರಿಗೆ ಸಲ್ಲಿಸಬೆಕು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ದೂರವಾಣಿ 080-22865522/ 080-27275114.

ಅರ್ಜಿ ಆಹ್ವಾನ

ರಾಮನಗರ: ಚನ್ನಪಟ್ಟಣ ಬಿಆರ್‌ಸಿ ಕೇಂದ್ರದಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ಪ್ರೌಢ 2 ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವಿಶೇಷ ಬಿ.ಇಡಿ ಪದವಿ ಹೊಂದಿರಬೇಕು. ಅರ್ಹ ಶಿಕ್ಷಕರು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಪಂಚಾಯಿತಿ ಭವನ, 2ನೇ ಮಹಡಿ, ಬಿ.ಎಂ. ರಸ್ತೆ, ರಾಮನಗರ– ಇಲ್ಲಿಗೆ ಜುಲೈ 5ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.

ಮಾಹಿತಿಗಾಗಿ ಮೊಬೈಲ್ 94806 95447 ಅಥವಾ 78927 00155 ಸಂಪರ್ಕಿಸಬಹುದು.

ಕೃಷಿ ತರಬೇತಿ

ರಾಮನಗರ: ಅನನ್ಯ ಆರ್ಟ್ಸ್ ವತಿಯಿಂದ ಕೃಷಿ ಕೋಟಾದಡಿ ಕೃಷಿ ಮತ್ತು ಕೃಷಿಯೇತರ ವಿಜ್ಞಾನ ಕೋರ್ಸುಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ವಿಶೇಷ ತರಬೇತಿಯನ್ನು ಜುಲೈ 4ರಿಂದ ರಾಮನಗರದ ಶರತ್ ಮೆಮೊರಿಯಲ್ ಶಾಲೆಯಲ್ಲಿ ಆಯೋಜಿಸಿದೆ. ಆಸಕ್ತರು ಮೊಬೈಲ್ 90364 00236, 91645 50797, 96323 63309 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT