ರಾಮನಗರ: ಕಾಮಗಾರಿಯಲ್ಲಿ ಅವ್ಯವಹಾರ ಆರೋಪದ ದೂರಿನ ಮೇರೆಗೆ, ನಗರದ ಅರ್ಕಾವತಿ ಬಡಾವಣೆಯಲ್ಲಿರುವ ಕಾವೇರಿ ನೀರಾವರಿ ನಿಗಮದ ಮಂಚನಬೆಲೆ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ನಡೆಸಿದರು.
ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆಸಿರುವ ತಂಡ, ಕಚೇರಿಯಲ್ಲಿರುವ ಕಡತಗಳ ಪರಿಶೀಲನೆಯಲ್ಲಿ ತೊಡಗಿದೆ. ಕಚೇರಿ ಅಧಿಕಾರಿಗಳು ಹೊರಗೆ ಹೋಗದಂತೆ ದಿಗ್ಭಂಧನ ಹಾಕಿದ್ದು, ಎಲ್ಲರ ಮೊಬೈಲ್ ಫೋನ್ ಗಳನ್ನು ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ನಿಗಮದ ಕಾಮಗಾರಿಗಳಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರ್ ಟಿಐ ಕಾರ್ಯಕರ್ತ ಶಂಕರ್ ಅವರು ಕಚೇರಿಗೆ ದೂರು ನೀಡಿದ್ದರು. ಆ ಮೇರೆಗೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.