ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ: ಆರ್‌ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Published 28 ಜೂನ್ 2024, 11:20 IST
Last Updated 28 ಜೂನ್ 2024, 11:20 IST
ಅಕ್ಷರ ಗಾತ್ರ

ರಾಮನಗರ: ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ (ಆರ್‌ಟಿಒ) ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಮತ್ತು ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಕಚೇರಿ ಮೇಲೆ ದಾಳಿ ನಡೆಸಿದೆ. ವಿವಿಧ ದಾಖಲೆಗಳು ಹಾಗೂ ಪರಿಶೀಲನೆಯಲ್ಲಿ ತೊಡಗಿದೆ. ಜೊತೆಗೆ ಕಚೇರಿಯಲ್ಲಿ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಸತೀಶ್ ಎಂಬುವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT