ಕನಕಪುರ (ರಾಮನಗರ): ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ, ಇತ್ತೀಚೆಗೆ ಉಪ ಲೋಕಾಯುಕ್ತ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಪಿ.ವಿ. ಸ್ನೇಹ ಅವರು ನಗರದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಮತ್ತು ಸಿಬ್ಬಂದಿಯೊಂದಗೆ ಘಟಕಕ್ಕೆ ಭೇಟಿ ನೀಡಿದ ಸ್ನೇಹ ಅವರು, ನಗರಸಭೆಯ ಅಧಿಕಾರಿಗಳಿಂದ ವಿಲೇವಾರಿ ಕುರಿತು ಮಾಹಿತಿ ಪಡೆದರು. ಈ ವೇಳೆ, ವಿಲೇವಾರಿಯಲ್ಲಿ ಹೇಳಿಕೊಳ್ಳುವಂತಹ ಪ್ರಗತಿ ಕಾಣದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಪರಿಸರ ಎಂಜಿನಿಯರ್ ಇಲ್ಲದಿರುವುದು ಅವರ ಗಮನಕ್ಕೆ ಬಂತು.

ಈ ವೇಳೆ, ನಗರಸಭೆ ಅಧಿಕಾರಿಗಳು ನಗರದ ತ್ಯಾಜ್ಯ ಸಂಗ್ರಹ ಹಾಗೂ ವಿಲೇವಾರಿ ವಿಲೇವಾರಿ ಕುರಿತು ಮಾಹಿತಿ ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸ್ನೇಹ ಅವರು, ತ್ಯಾಜ್ಯ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಂದೆಯೂ ದಿಢೀರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಡಿಎಲ್ಆರ್ ಕಚೇರಿಗೆ ಭೇಟಿ: ನಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ (ಎಡಿಎಲ್ಆರ್) ಕಚೇರಿಗೆ ಸ್ನೇಹ ಅವರು ದಿಢೀರ್ ಭೇಟಿ ನೀಡಿದರು. ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಕಾಲದಲ್ಲಿ ಬಂದಿರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.