ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಗ್ರಾಮಾಂತರ ಕ್ಷೇತ್ರ: ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಕೆ

Published 4 ಏಪ್ರಿಲ್ 2024, 6:59 IST
Last Updated 4 ಏಪ್ರಿಲ್ 2024, 6:59 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್‌. ಮಂಜುನಾಥ್ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಪತ್ನಿ ಅನುಸೂಯ, ಬಿಜೆಪಿ ಶಾಸಕರಾದ ಡಾ. ಸಿ.ಎನ್.‌ ಅಶ್ವತ್ಥ ನಾರಾಯಣ, ಎಂ.‌ ಕೃಷ್ಣಪ್ಪ ಹಾಗೂ ‌ಮುನಿರತ್ನ ಅವರು ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಲು ಸಾಥ್ ನೀಡಿದರು.

ನಾಮಪತ್ರ ಸಲ್ಲಿಸುವುದಕ್ಕೆ ಮುಂಚೆ ಮಂಜುನಾಥ್ ಅವರು, ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪತ್ನಿ ಮತ್ತು ಮುಖಂಡರೊಂದಿಗೆ ಪೂಜೆ ಸಲ್ಲಿಸಿದರು. ಬಳಿಕ, ಎಸ್ಪಿ ಕಚೇರಿ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದರು.

ಬಿಜೆಪಿ ಶಾಸಕರು, ‌ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಡೊಳ್ಳು, ತಮಟೆ ಹಾಗೂ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ತಂದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT