ಶುಕ್ರವಾರ, ಫೆಬ್ರವರಿ 26, 2021
31 °C

ಲಾರಿ ಡಿಕ್ಕಿ: ಧರೆಗೆ ಉರುಳಿದ ವಿದ್ಯುತ್‌ ಕಂಬಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ನಗರದ ಹೊರವಲಯದಲ್ಲಿ ಇರುವ ಕುಂಬಾಪುರ ಗೇಟ್ ಬಳಿ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸರಕು ಸಾಗಣೆ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ನಾಲ್ಕು ಕಂಬಗಳು ನೆಲಕ್ಕೆ ಉರುಳಿ ಬಿದ್ದವು.

ಮುಂಜಾನೆ ಐದರ ವೇಳೆಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಕು ಹೊತ್ತು ಸಾಗುತ್ತಿದ್ದ ಲಾರಿ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಯಿತು. ಅಪಘಾತದ ರಭಸಕ್ಕೆ ಅಕ್ಕಪಕ್ಕದ ಮೂರು ಕಂಬಗಳು ಧರೆಗೆ ಉರುಳಿದವು. ಸ್ಥಳೀಯರು ಹಾಗೂ ಈ ಮಾರ್ಗವಾಗಿ ಸಂಚರಿಸುತ್ತಿದ್ದ ಇತರೆ ವಾಹನಗಳ ಸವಾರರು ಈ ಬಗ್ಗೆ ಮಾಹಿತಿ ನೀಡಿ ಉಳಿದ ವಾಹನಗಳ ಸಂಚಾರ ತಡೆದರು. ಇದರಿಂದಾಗಿ ಅನಾಹುತ ತಪ್ಪಿತು. ಘಟನೆಯಿಂದಾಗಿ ಕೆಲವು ಕಾಲ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು.

ಸಾರ್ವಜನಿಕರು ಬೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಈ ಮಾರ್ಗದಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಿದರು. ಬೆಳಿಗ್ಗೆ 10ರ ನಂತರ ಕಂಬಗಳ ದುರಸ್ತಿ ಕಾರ್ಯಾಚರಣೆಯು ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು