ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಬದಲಾವಣೆ ಬಿಜೆಪಿ ಹುನ್ನಾರ: ಡಿ.ಕೆ.ಸುರೇಶ್ ವಾಗ್ದಾಳಿ

Published 19 ಏಪ್ರಿಲ್ 2024, 13:44 IST
Last Updated 19 ಏಪ್ರಿಲ್ 2024, 13:44 IST
ಅಕ್ಷರ ಗಾತ್ರ

ಚನ್ನಪಟ್ಟಣ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನವನ್ನು ಬದಲಾಯಿಸಲು ಹೊರಟಿದೆ. ಸಂವಿಧಾನದ ಆಶಯ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು. ಜನರು ರಾಹುಲ್ ಗಾಂಧಿ ಅವರನ್ನು ಬೆಂಬಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಮನವಿ ಮಾಡಿದರು.

ನಗರದ ಮಂಗಳವಾರಪೇಟೆ ಬಸವನಗುಡಿ ಬಳಿ ಶುಕ್ರವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಇಡೀ ವಿಶ್ವದಲ್ಲಿಯೇ ಮೆಚ್ಚುಗೆ ಪಡೆದಿರುವ ಸಂವಿಧಾನ ಬದಲಾವಣೆ ಮಾಡಲು ಹೊರಟಿದೆ. ಮುಂದಿನ ದಿನಗಳಲ್ಲಿ ಮತದಾರರೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

’ಸಂಸದರಾಗಿದ್ದ ಹತ್ತು ವರ್ಷ ಕಾಲ ಸರ್ಕಾರದ ಅನುದಾನಲ್ಲಿ ಹಲವು ಜನಪರ ಕೆಲಸ ಕಾರ್ಯ ಮಾಡಿದ್ದೇನೆ. ಸಾರ್ವಜನಿಕರಿಗೆ ಮೂಲ ಸೌಕರ್ಯ ನೀಡಲು ಪ್ರಾಮಾಣಿಕವಾಗಿ ಶ್ರಮಿಸಲಾಗಿದೆ. ಜನಸಂಪರ್ಕ ಸಭೆ ಏರ್ಪಡಿಸಿ ಸಮಸ್ಯೆ ಆಲಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗಿದೆ. ರೈತರು, ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗಿದೆ’ ಎಂದರು.

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡವರು, ಕೂಲಿ ಕಾರ್ಮಿಕರು, ಮಹಿಳೆಯರು, ನಿರುದ್ಯೋಗಿ ಯುವಕ–ಯುವತಿಯರಿಗೆ ಅನುಕೂಲವಾಗಲಿ ಎಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಯಾವುದೇ ಪಕ್ಷ ಭೇದವಿಲ್ಲದೆ ಸಾರ್ವಜನಿಕರಿಗೆ
ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಆದರೆ, ಕೆಲವರು ಇದರ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದ ಈ ಯೋಜನೆಗಳ ಲಾಭ ಪಡೆದು ಜೀವನ ನಡೆಸುತ್ತಿರುವ ಜನರು ಕಾಂಗ್ರೆಸ್ ಬೆಂಬಲಿಸುವ ವಿಶ್ವಾಸವಿದೆ ಎಂದರು.

ಮಾಜಿ ಶಾಸಕ ಎಂ.ಸಿ.ಅಶ್ವಥ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಅಧ್ಯಕ್ಷ ರಘುನಂದನ್ ರಾಮಣ್ಣ, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಸುನೀಲ್ ಕುಮಾರ್, ನಗರಸಭೆ ಅಧ್ಯಕ್ಷ ಪ್ರಶಾಂತ್, ಮುಖಂಡರಾದ ದುಂತೂರು ವಿಶ್ವನಾಥ್, ಎಚ್.ಎಸ್.ಕಾಂತರಾಜು ಇತರರು ಹಾಜರಿದ್ದರು.

ನಂತರ ಡಿ.ಕೆ.ಸುರೇಶ್ ನಗರದ ಹಲವು ವಾರ್ಡ್‌ಗಳಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸಿದರು. ಅಭಿಮಾನಿಗಳು ಬೃಹತ್ ಸೇಬಿನ ಹಾರ, ದೊಡ್ಡ ಹೂವಿನಹಾರ ಹಾಕಿ ಸ್ವಾಗತ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT