ರಾಮನಗರ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚಳ ಮಾಡಲು ಅಗತ್ಯ ಕ್ರಮಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಸೌಲಭ್ಯ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಿಗುವ ಸೌಲಭ್ಯ ಕುರಿತು ಅವರ ಪೋಷಕರಿಗೆ ಅರಿವು ಮೂಡಿಸಬೇಕು. ಆ ಮೂಲಕ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಜು.30ರವರೆಗೆ ಶಾಲಾ ಪ್ರವೇಶಕ್ಕೆ ಅವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವಂತೆ ಕ್ರಮವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಉತ್ತಮ ಫಲಿತಾಂಶಕ್ಕೆ ಒತ್ತು ನೀಡಬೇಕು. ಜಿಲ್ಲೆಗೆ ಇನ್ನು ಹೆಚ್ಚಿನ ಫಲಿತಾಂಶ ಬರಲು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಹೆಚ್ಚುವರಿ ಜಿಲ್ಲಾಧಿಕಾರಿ ಮುತುವರ್ಜಿ ವಹಿಸಬೇಕು ಎಂದರು.

ಮಕ್ಕಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂದು ಗುರುತಿಸಿ ಆ ಮಕ್ಕಳಿಗೆ ವಿಶೇಷ ತರಗತಿ ಮಾಡಿ ಶೈಕ್ಷಣಿಕವಾಗಿ ಬಲಪಡಿಸಬೇಕು. ಪ್ರತಿದಿನ ಶಾಲಾ ಅವಧಿ ನಂತರ ಮಕ್ಕಳನ್ನು ಗುಂಪುಗಳಾಗಿ ವಿಂಗಡಿಸಿ ಪ್ರತಿ ಗುಂಪಿಗೂ ಒಬ್ಬ ಶಿಕ್ಷಕರ ಸಮ್ಮುಖದಲ್ಲಿ ಗುಂಪು ಅಧ್ಯಯನ ಕಾರ್ಯಕ್ರಮ ಆಯೋಜಿಸಿ ಮಕ್ಕಳ ಕಲಿಕೆಯಲ್ಲಿನ ಸಂದೇಹ ನಿವಾರಿಸಿ ಸುಲಭ ಕಲಿಕೆಗೆ ಅನುವು ಮಾಡಿಕೊಡಬೇಕು ಎಂದರು.

ಅವಶ್ಯವಿರುವ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ ಕಲ್ಪಿಸಬೇಕು. ಬಿಇಒಗಳು ತಮ್ಮ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಅಲ್ಲಿನ ವಸ್ತುಸ್ಥಿತಿ ಅರಿತು ಕ್ರಮಕೈಗೊಳ್ಳಬೇಕು. ಅಧಿಕಾರಿಗಳು ಸರ್ಕಾರಿ ಶಾಲೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಲ್ಲಾ ಪಂಚಾಯಿತಿ ಸಿಇಒ ಅನ್ಮೋಲ್ ಜೈನ್, ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕಿ ಅನಿತಾ ನಜಾರೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ವಿ.ಸಿ ಬಸವರಾಜೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ನಾಗಮ್ಮ, ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

‘ಶಾಲೆಗೆ ಬಾ’ ಅಭಿಯಾನ ಹಮ್ಮಿಕೊಳ್ಳಿ

ಸರ್ಕಾರಿ ಶಾಲೆಗಳ ಪ್ರವೇಶಾತಿಗೆ ಮಕ್ಕಳ ಪೋಷಕರಿಗೆ ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯ ಗುಣಮಟ್ಟದ ಶಿಕ್ಷಣ ಕುರಿತು ಮನವೊಲಿಸಬೇಕು. ಪ್ರವೇಶಾತಿ ಸಂಬಂಧಿ ಜಿಲ್ಲಾ ಪಂಚಾಯಿತಿ ಸಿಇಒ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಕ್ಕಳ ದಾಖಲಾತಿಗೆ ಇರುವ ಸಮಸ್ಯೆ ಚರ್ಚಿಸಬೇಕು ಎಂದು ತಿಳಿಸಿದರು. ಜುಲೈ ಅಂತ್ಯದೊಳಗಾಗಿ ಎಲ್ಲ ಮಕ್ಕಳಿಗೆ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸಬೇಕು. ಜತೆಗೆ ಮಕ್ಕಳಿಗೆ ಶಾಲೆಗಳಲ್ಲಿ ವಿತರಿಸಲಾಗುವ ಶೂ ಹಾಗೂ ಸಾಕ್ಸ್ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಮನೆ ಮನೆಗೆ ಭೇಟಿ ನೀಡಿ ‘ಶಾಲೆಗೆ ಬಾ’ ಅಭಿಯಾನ ಹಮ್ಮಿಕೊಳ್ಳಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.