ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಮಸ್ಯೆ ಬಗೆಹರಿಸಲು ಒತ್ತಾಯ

ಒತ್ತಾಯ
Published 24 ಫೆಬ್ರುವರಿ 2024, 7:00 IST
Last Updated 24 ಫೆಬ್ರುವರಿ 2024, 7:00 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನಲ್ಲಿ ರೈತರ ಸಮಸ್ಯೆ ಆಲಿಸಿ ಪರಿಹಾರ ಸೂಚಿಸುವಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಮುಂದಾಗಿಲ್ಲ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ದೂರಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ತಿಂಗಳು ಸಂಘದ ವತಿಯಿಂದ ವಿವಿಧ ಸಮಸ್ಯೆ  ಬಗೆಹರಿಸುವಂತೆ ಆಗ್ರಹಿಸಿ ಸೋಮೇಶ್ವರ ಬಡಾವಣೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ರಸ್ತೆ ತಡೆ ನಡೆಸಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಗ್ರೇಡ್-2 ತಹಶೀಲ್ದಾರ್, ಒಂದು ವಾರದ ಒಳಗೆ ರೈತರು ಮತ್ತು ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಆಲಿಸಿ ಪರಿಹಾರ ಸೂಚಿಸುವುದಾಗಿ ಭರವಸೆ ನೀಡಿದ್ದರು. ಆದರೆ, ತಿಂಗಳು ಕಳೆದರೂ ರೈತರ ಸಭೆ ಕರೆಯಲಿಲ್ಲ ಎಂದು ದೂರಿದರು.

ಹಲವು ಸಮಸ್ಯೆಗಳನ್ನು ಬಗೆಹರಿಸಲು ತಹಶೀಲ್ದಾರ್‌ ಒಂದು ವಾರದ ಒಳಗೆ ರೈತರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ಶಿವಲಿಂಗಯ್ಯ, ರವಿಕುಮಾರ್, ಬುಡೇನ್ ಸಾಬ್, ಗೊಲ್ಲರಹಟ್ಟಿ ನಾಗರಾಜ್, ಚಿಕ್ಕಣ್ಣ, ಪಟೇಲ್ ಹನುಮಂತಯ್ಯ, ರವಿ, ಚನ್ನರಾಯಪ್ಪ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT