ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ

Published 26 ಜೂನ್ 2024, 5:06 IST
Last Updated 26 ಜೂನ್ 2024, 5:06 IST
ಅಕ್ಷರ ಗಾತ್ರ

ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸುಧಾರಣೆ ಆಗಬೇಕಿದ್ದು ಶ್ರದ್ಧೆ, ಪ್ರಾಮಾಣಿಕತೆಯಿಂದ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಹೇಳಿದರು.

ಪಟ್ಟಣದ ಹೊಂಬಾಳಮ್ಮನಪೇಟೆ ಸರ್ಕಾರಿ ಶಾಲಾ ಆವರಣದಲ್ಲಿ ಈಚೆಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ 150ಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳಿ ಉಚಿತವಾಗಿ ಶಾಲಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳು ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವ ಕೇಂದ್ರಗಳಾಗಿವೆ, ಇಲ್ಲಿ ವಿದ್ಯಾ‌ರ್ಥಿಗಳನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಲಾಗುತ್ತದೆ.  ಶಿಕ್ಷಕರು ಮಕ್ಕಳಲ್ಲಿ ಕಲಿಕೆಯ ವಿಷಯದಲ್ಲಿ ಕುತೂಹಲ, ಸ್ಫೂರ್ತಿ, ಓದುವ ಚೈತನ್ಯವನ್ನು ತುಂಬುವ ಮೂಲಕ ಮೌಲ್ಯಾಧರಿತ ಶಿಕ್ಷಣ ನೀಡಬೇಕು ಎಂದು ತಿಳಿಸಿದರು.

ಯುವ ಬೆಂಗಳೂರು ಟ್ರಸ್ಟ್ ಸಂಸ್ಥಾಪ ಅಧ್ಯಕ್ಷ ಕಿರಣ್ ಸಾಗರ್ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ನಡೆಸುತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಶಾಲಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ  ಎಂದು ತಿಳಿಸಿದರು.

ಯುವ ಬೆಂಗಳೂರು ಟ್ರಸ್ಟ್ ಉಪಾಧ್ಯಕ್ಷ ಸುನೀಲ್, ಕಾರ್ಯದರ್ಶಿ ಶ್ವೇತಾ, ದಾನಿ ಚಂದ್ರಶೇಖರ್, ಸದಸ್ಯರಾದ ಅಶೋಕ್, ಮುಖ್ಯ ಶಿಕ್ಷಕ ವೆಂಕಟಾಚಲಯ್ಯ, ಶಿಕ್ಷಕರಾದ ಬಿ.ಎನ್. ಜಯರಾಮ್, ಉಮೇಶ್, ಬಸವರಾಜು, ಪತಿಗೌಡ, ಸಿಆರ್‌ಪಿ ಶಿವಕುಮಾರ್, ಎಸ್‌ಡಿಎಂಸಿ ಅಧ್ಯಕ್ಷೆ ಮಂಗಳಗೌರಮ್ಮ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT