ಮಾಗಡಿ: ಮಾರ್ಚ್ 29 ಭಾನುವಾರ ತಾಲ್ಲೂಕಿನ ಬೆಳಗುಂಬ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ತಿಗೇಟ್ ಬಳಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಎಸ್. ರಾಮಯ್ಯ ಆಸ್ಪತ್ರೆ, ಮಹಾನಾಡು ಕಟ್ಟೆಮನೆ ಹಾಗೂ ಡಿ.ಕೆ. ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ಆರೋಗ್ಯ ಶಿಬಿರ ಆಯೋಜಿಸಲಾಗಿದೆ. ಸ್ತ್ರೀ ರೋಗ, ಕ್ಯಾನ್ಸರ್ ತಪಾಸಣೆ, ದಂತ ಚಿಕಿತ್ಸೆ, ಇಸಿಜಿ, ಕಣ್ಣಿನ ತಪಾಸಣೆ ನಡೆಯಲಿದೆ ಎಂದರು.

ಅವಶ್ಯಕತೆ ಇರುವವರಿಗೆ ಸ್ಥಳದಲ್ಲೇ ಕನ್ನಡಕ ವಿತರಣೆ ಹಾಗೂ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಿಸಲಾಗುವುದು. ಶಿಬಿರಕ್ಕೆ ಬರುವ ಸಾರ್ವಜನಿಕರಿಗೆ ಆಟೊ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ತಡೆ- ಕಳವಳ: ಮಾಗಡಿ ಪಟ್ಟಣದಲ್ಲಿ ಸುಮಾರು ₹ 40 ಕೋಟಿ ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಬಾಲಕೃಷ್ಣ ಮುಂದಾಗಿದ್ದಾರೆ. ಆದರೆ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿರುವುದು ಬೇಸರದ ಸಂಗತಿ ಎಂದರು.

ಪಟ್ಟಣದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಚರಂಡಿ ಪಕ್ಕದಲ್ಲಿ ಪಾದಚಾರಿ ಮಾರ್ಗ ಅಭಿವೃದ್ಧಿಗಾಗಿ ರಸ್ತೆಯ ಎರಡೂ ಬದಿಯಲ್ಲಿ ತಲಾ 1.5 ಮೀಟರ್ ಜಾಗ ವಶಪಡಿಸಿಕೊಳ್ಳಲಾಗುತ್ತಿದೆ. ಅಂಗಡಿ ಮತ್ತು ಮನೆ ಕಟ್ಟುಕೊಳ್ಳುವವರು ಚರಂಡಿಯಿಂದ ಒಂದುವರೆ ಮೀಟರ್ ದೂರ ಕಟ್ಟಿಕೊಳ್ಳಬೇಕು ಎಂದರು.

ಏ. 26 ರಂದು ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ನಾಗರಾಜು, ನರಸಿಂಹಯ್ಯ, ರಾಮಣ್ಣ, ಚಿಕ್ಕಣ್ಣ, ರಾಮಕೃಷ್ಣಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-14-552151413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.