ಮಾಗಡಿ: ವಿನ್ನರ್ಸ್‌ ಶಾಲೆಯಲ್ಲಿ ಮಕ್ಕಳಿಗೆ ಸಸಿ ವಿತರಣೆ

ಮಂಗಳವಾರ, ಜೂನ್ 25, 2019
22 °C

ಮಾಗಡಿ: ವಿನ್ನರ್ಸ್‌ ಶಾಲೆಯಲ್ಲಿ ಮಕ್ಕಳಿಗೆ ಸಸಿ ವಿತರಣೆ

Published:
Updated:
Prajavani

ಮಾಗಡಿ: ಪರಿಸರ ಸಂರಕ್ಷಣೆಯ ಹೊಣೆಗಾರಿಕೆ ಸರ್ವರ ಮೇಲೂ ಇದೆ. ಪರಿಸರ ನಾಶದಿಂದ ಜೀವನದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ವಿನ್ನರ್ಸ್‌ ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಪಾಷಿತ್ ತಿಳಿಸಿದರು.

ಪಟ್ಟಣದ ವಿನ್ನರ್ಸ್ ಶಾಲೆ ಮತ್ತು ಆಲ್-ಫಲಾ ಪಿಯು ಕಾಲೇಜಿನಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸಿ ಅವರು ಮಾತನಾಡಿದರು. 

ಪ್ರಾಂಶುಪಾಲ ಶಹಬಾಜ್ ಅಹಮದ್ ಮಾತನಾಡಿ ‘ಪರಿಸರ ಉಳಿಸಿದರೆ ಮಾತ್ರ ಎಲ್ಲ ಜೀವಿಗಳು ಬದುಕಲು ಸಾಧ್ಯ. ಪರಿಸರದಿಂದಾಗುವ ಅನುಕೂಲಗಳ ಬಗ್ಗೆ ಮಕ್ಕಳಿಗೆ ಶಾಲಾ ಹಂತದಲ್ಲೇ ತಿಳಿಸಬೇಕು’ ಎಂದರು.

ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಸಸಿ ನೆಟ್ಟು ನೀರೆರೆದರು. ‘ಅರಣ್ಯ ಉಳಿಸುವುದು ನಮ್ಮೆಲ್ಲರ ಹೊಣೆ’ ಎಂಬುದರ ಬಗ್ಗೆ ಪ್ರಬಂಧ ಏರ್ಪಡಿಸಲಾಗಿತ್ತು. ವಿದ್ಯಾರ್ಥಿನಿ ಸುಬೇರ ಬಾನು ಪ್ರಥಮ, ಸಹನ ದ್ವಿತೀಯ ಬಹುಮಾನ ಗಳಿಸಿದರು.

ಉಪನ್ಯಾಸಕರಾದ ಕೃಷ್ಣಮೂರ್ತಿ, ದಕ್ಷಿಣಾಮೂರ್ತಿ, ಕುಮಾರ್ ಗೌಡ, ಮೋಹನ್, ಚಂದ್ರಶೇಖರಯ್ಯ, ಪುಷ್ಪಲತಾ, ಇಲಿಯಾಜ್, ಫಿರ್ದೋಸ್, ಶೈಲಜ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !