ಮಾಗಡಿ: ಪಟ್ಟಣದ ನಟರಾಜ ಬಡಾವಣೆಯಲ್ಲಿ ಒಳಚರಂಡಿ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಲುಷಿತ ನೀರು ರಸ್ತೆಯಲ್ಲೇ ಮಡುಗಟ್ಟಿ ನಿಂತು ದುರ್ವಾಸನೆ ಬೀರುತ್ತಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳಿಂದ ಮುಗಿಯದ ರಸ್ತೆ ಕಾಮಗಾರಿ ತಿರುಮಲೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ರಸ್ತೆ ಅಗೆದು ಹಾಗೆಯೇ ಬಿಟ್ಟು ಎರಡು ವರ್ಷ ಕಳೆದಿವೆ. ಕಾಮಗಾರಿಯ ಭಾಗವಾಗಿ ಸೇತುವೆ ನಿರ್ಮಿಸಲು ಮ್ಯಾನ್ಹೋಲ್ ಮೇಲೆ ಮಣ್ಣು ಸುರಿಯಲಾಗಿದೆ. ಇದರಿಂದಾಗಿ ಮ್ಯಾನ್ಹೋಲ್ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಚನ್ನಪ್ಪ ಬಡಾವಣೆ ಹಾಗೂ ಎನ್ಇಎಸ್ ಬಡಾವಣೆಯಿಂದ ಹರಿದು ಬರುವ ಕೊಳಚೆ ನೀರು ಹೊರಹೋಗಲಾಗದೆ ರಸ್ತೆಯ ಮೇಲೆ ಹರಿಯುತ್ತಿದೆ.

ಮ್ಯಾನ್ಹೋಲ್ ತುಂಬಿ ಹರಿಯುತ್ತಿರುವುದರಿಂದ ಕಲುಷಿತ ನೀರು ಕರಣೀಕರ ಕಲ್ಯಾಣಿ ಬಳಿ ಬಂದು ಶೇಖರಣೆಯಾಗುತ್ತಿದೆ. ಈ ನೀರು ಮಡುಗಟ್ಟಿ ನಿಂತಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ದುರ್ವಾಸನೆ ಹರಡಿದೆ. ಇದರಿಂದಾಗಿ ಸ್ಥಳೀಯರು ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ರೋಗಭೀತಿಯಲ್ಲಿ ನಿವಾಸಿಗಳು: ಕಲುಷಿತ ನೀರಿನ ಹರಿವಿನಿಂದಾಗಿ ಪ್ರದೇಶದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಅಷ್ಟೇ ಅಲ್ಲದೆ ಚರಂಡಿಗಳಲ್ಲಿ ಸೇರಿಕೊಂಡಿರುವ ಇಲಿ, ಹೆಗ್ಗಣ ಹಾಗೂ ವಿಷಜಂತುಗಳು ಹಗಲು ಹೊತ್ತಿನಲ್ಲೇ ನಿವಾಸಿಗಳ ಮನೆಗಳಿಗೆ ನುಗ್ಗುತ್ತಿವೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಮಸ್ಯೆ ಬಗ್ಗೆ ಹಲವು ಬಾರಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ನಟರಾಜ ಬಡಾವಣೆ ನಿವಾಸಿಗಳು ದೂರಿದ್ದಾರೆ.

ಕಲುಷಿತ ನೀರು ಸರಾಗವಾಗಿ ಹರಿದು ಹೋಗಲು ತಕ್ಷಣ ಕ್ರಮ ಕೈಗೊಳ್ಳಬೇಕು. ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-818707567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.