ಮಾಗಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್ ಹಾಗೂ ಚನ್ನಪಟ್ಟಣದ ಜೀವಾಮೃತ ಕೇಂದ್ರದ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಜಣ್ಣ ಡಿ., ಸ್ವತಃ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತ ಅಮೂಲ್ಯವಾಗಿ ಪ್ರತಿಯೊಬ್ಬರಿಗೂ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವಕ್ಕೆ ಆಸರೆಯಾಗಲಿದ್ದಾರೆ. ಆರೋಗ್ಯವಂತ ವ್ಯಕ್ತಿ ವರ್ಷಕ್ಕೆ ಒಂದು ಬಾರಿಯಾದರೂ ರಕ್ತದಾನ ಮಾಡುವ ಮೂಲಕ ತಾವು ಕೂಡ ಆರೋಗ್ಯವಾಗಿ ಇರಲು ಸಹಕಾರಿಯಾಗಲಿದೆ ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಕೆ.ವಿ.ರಮೇಶ್ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಶಿವಪ್ರಕಾಶ್ ಬಿ.ಸಿ.ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ಮತ್ತು ತುರ್ತು ಸಂದರ್ಭಗಳಲ್ಲಿ ಅದರ ಅಗತ್ಯದ ಕುರಿತು ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಶಿವಪ್ರಕಾಶ್, ಪ್ರಕಾಶ್, ಲೋಹಿತ್, ಉಮೇಶ್, ಮಾನಸ ಹಾಗೂ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಅರುಣ್ ಕುಮಾರ್, ವಿದ್ಯಾರ್ಥಿ ಮುಖಂಡರಾದ ಕುಮಾರ್, ಪವನ್, ಅಜಯ್, ಹೇಮಂತ್, ನಮ್ರತ, ಚಂದ್ರಕಲಾ, ಭೀಮ, ಪ್ರಜ್ವಲ್, ನಿತಿನ್, ಶಂಕರ, ಮನು ಹಾಗೂ ರೋಹಿತ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-14-1533926235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.