ಮಾಗಡಿ: ಪಟ್ಟಣದ ಬಡವರು ಮತ್ತು ಕಾರ್ಮಿಕರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ ಇದೀಗ ಅಡುಗೆ ಅನಿಲ (ಸಿಲಿಂಡರ್) ಕೊರತೆಯಿಂದಾಗಿ ಸಮಸ್ಯೆಗೆ ಸಿಲುಕಿದೆ.

ಸಿಲಿಂಡರ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬೆಳಗಿನ ಉಪಹಾರ ಕಡಿತಗೊಂಡಿದೆ. ಕೆಲಸಕ್ಕೆ ಹೋಗುವ ಕಾರ್ಮಿಕರು, ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರು ಹಾಗೂ ಜನಸಾಮಾನ್ಯರು ತಿಂಡಿ ಇಲ್ಲದೆ ವಾಪಸ್ ಹೋಗುವಂತೆ ಆಗಿದೆ.

ಸಿಲಿಂಡರ್ ಕೊರತೆ ಕಾರಣ ಬೆಳಗಿನ ತಿಂಡಿ ತಯಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಕ್ಯಾಂಟೀನ್ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ವಾರಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡುತ್ತಿರುವುದರಿಂದ ಇಡ್ಲಿ ಮಾಡಲು ಆಗುತ್ತಿಲ್ಲ. ಮಧ್ಯಾಹ್ನದ ಊಟಕ್ಕೆ ಸೌದೆ ಒಲೆಯಲ್ಲೆ ತಯಾರಿ ಮಾಡುತ್ತಿದ್ದು ಇನ್ನೂ 15 ದಿನಗಳ ಕಾಲ ಸಿಲಿಂಡರ್ ಪೂರೈಕೆ ಮಾಡಲು ಸಮಸ್ಯೆ ಎಂದು ಹೇಳಿರುವುದರಿಂದ ಬೆಳಗಿನ ತಿಂಡಿಯಾಗಿ ರೈಸ್ ಬಾತ್ ಮಾತ್ರ ಮಾಡಲಾಗುತ್ತಿದೆ ಎಂದು ಅಡುಗೆ ಸಿಬ್ಬಂದಿ ತಿಳಿಸಿದ್ದಾರೆ.

ಸಾರ್ವಜನಿಕರ ದೂರು: ಬೆಳಿಗ್ಗೆ ₹5-10 ರೂಪಾಯಿಗೆ ತಿಂಡಿ ಸಿಗುತ್ತದೆ ಎಂದು ಇಲ್ಲಿಗೆ ಬಂದರೆ ಇಲ್ಲಿ ಒಲೆ ಉರಿಯುತ್ತಿಲ್ಲ. ಸಿಲಿಂಡರ್ ಕೊರತೆಯಿಂದ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿರಾ ಕ್ಯಾಂಟೀನ್ನಲ್ಲಿ ಸಿಲಿಂಡರ್ ಕೊರತೆ ಕುರಿತು ಪುರಸಭೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಬೇಕಿದೆ. ಹಸಿದವರಿಗೆ ಅನ್ನ ನೀಡುವ ಯೋಜನೆಯು ಸಣ್ಣ ಕಾರಣಗಳಿಗಾಗಿ ನಿಂತು ಹೋಗಬಾರದು ಎಂಬುದು ನಾಗರಿಕರ ಒತ್ತಾಯವಾಗಿದೆ.

ಗ್ಯಾಸ್ ಏಜೆನ್ಸಿಗಳಿಂದ ಪೂರೈಕೆ ವಿಳಂಬವಾಗುತ್ತಿರುವುದು ಈ ಸಮಸ್ಯೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆ ಮತ್ತು ಪೂರೈಕೆ ಸರಪಳಿ ಕಡಿತಗೊಂಡಿರುವುದು ಸ್ಥಳೀಯವಾಗಿಯೂ ಈ ಸಮಸ್ಯೆಯನ್ನು ಸೃಷ್ಟಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-14-1928825359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.