ಮಾಗಡಿ: ದಾಬಸ್ಪೇಟೆ ಕೈಗಾರಿಕಾ ಪ್ರದೇಶಕ್ಕೆ ತಾಲ್ಲೂಕಿನ ಮೂಲಕ ಹಾದು ಹೋಗಿರುವ ಕಾವೇರಿ ನೀರು ಪೈಪ್ ಲೈನ್ ಕಾಮಗಾರಿಗೆ ರೈತ ಸಂಘ ವಿರೋಧ ವ್ಯಕ್ತಪಡಿಸದಂತೆ ಶಾಸಕ ಎಚ್.ಸಿ ಬಾಲಕೃಷ್ಣ ಮನವಿ ಮಾಡಿದ್ದಾರೆ. ನಾಲ್ಕು ತಿಂಗಳ ಕಾಲಾವಕಾಶ ನೀಡಿದರೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದೂಡಲಾಗಿದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ತಿಳಿಸಿದ್ದಾರೆ.

ಶಾಸಕ ಬಾಲಕೃಷ್ಣ ಅವರು ಷರತ್ತಿನೊಂದಿಗೆ ರೈತರಿಗೂ ನೀರು ಕೊಡಿಸುವ ಭರವಸೆ ನೀಡಿದ ನಂತರವೇ ಕಾಮಗಾರಿಗೆ ಅನುಮತಿ ನೀಡಿದ್ದಾರೆ. ಹೇಮಾವತಿ ಎಕ್ಸ್ಪ್ರೆಸ್ ಕಾಲುವೆ ವಿಚಾರದಲ್ಲಿ ರೈತ ಸಂಘ ಹೋರಾಟ ನಡೆಸಲಿದೆ. ರೈತ ಸಂಘದ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು.

ತಿಂಗಳಾಂತ್ಯದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳು ಎತ್ತುವಿಕೆ ಮತ್ತು ಸ್ವಚ್ಛತೆ ಕುರಿತು ಬೈಕ್ ಜಾಥಾ ನಡೆಸಲಾಗುವುದು. ರೈತ ಭವನ ನಿರ್ಮಾಣ, ವಿದ್ಯುತ್ ಪೂರೈಕೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಲಾಗಿದೆ. ರೈತ ಸಂಘದ ಹೋರಾಟ ವೈಯಕ್ತಿಕ ಲಾಭಕ್ಕಲ್ಲ ಎಂದು ಮುಖಂಡ ಶಿವಲಿಂಗಯ್ಯ ಹೇಳಿದರು.

ಇದೇ ವೇಳೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ರವಿಕುಮಾರ್, ಕರಿಯಪ್ಪ ಬುಡನ್ ಸಾಬ್, ಚಿಕ್ಕಣ್ಣ, ವೆಂಕಟೇಶ್, ನಾರಾಯಣ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-14-314716418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.