ಮಾಗಡಿ: ಕೆಲವು ದಿನಗಳಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಮಾಗಡಿ ಪುರಸಭೆ ಸಮೀಪದ ಕೆಂಪೇಗೌಡ ಪ್ರತಿಮೆಯನ್ನು ಹೈಕೋರ್ಟ್ ಆದೇಶದಂತೆ ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಮಂಗಳವಾರ ಸಂಜೆ ಸ್ಥಳಾಂತರಿಸಲಾಯಿತು.

ಸರ್ಕಾರಿ ಆಸ್ಪತ್ರೆ ನಿರ್ಮಾಣದ ಹಿನ್ನೆಲೆಯಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ತೆರವು ಮಾಡಿ, ಪುರಸಭೆ ಕಚೇರಿ ಮುಂಭಾಗದಲ್ಲಿ ನಿರ್ಮಾಣ ಮಾಡಿದ ತಾತ್ಕಾಲಿಕ ಶೆಡ್ನಲ್ಲಿ ಪೊಲೀಸ್ ಕಾವಲಿನಲ್ಲಿ ಇರಿಸಲಾಗಿದೆ.

ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ 18 ವರ್ಷಗಳ ಹಿಂದೆ ಈ ಪ್ರತಿಮೆ ನಿರ್ಮಾಣ ಮಾಡಿದ್ದರು. ಈಗ ₹ 42 ಕೋಟಿ ವೆಚ್ಚದ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕೆಂಪೇಗೌಡ ಪ್ರತಿಮೆಯನ್ನು ಸದ್ಯ ಇರುವ ಜಾಗದಿಂದ 500 ಮೀಟರ್ ಪಕ್ಕದಲ್ಲಿ ಸ್ಥಳಾಂತರ ಮಾಡಲು ಉದ್ದೇಶಲಾಗಿತ್ತು. ಇದಕ್ಕೆ ಎಚ್.ಎಂ.ಕೃಷ್ಣಮೂರ್ತಿ ವಿರೋಧ ವ್ಯಕ್ತಪಡಿಸಿದ್ದರು.

ಯಾವುದೇ ಕಾರಣಕ್ಕೂ ಪ್ರತಿಮೆ ಸ್ಥಳಾಂತರ ಮಾಡಬಾರದು. ಅನುಮತಿ ಪಡೆದು ಸೂಕ್ತ ಜಾಗದಲ್ಲಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಹೋರಾಟ ಮಾಡಿ, ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು.

ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದ ಹಿನ್ನೆಲೆಯಲ್ಲಿಮಂಗಳವಾರ ಸಂಜೆ ಪೊಲೀಸ್ ಬಿಗಿ ಬಂದೋಬಸ್ತ್ ನಲ್ಲಿ ಪ್ರತಿಮೆ ತೆರವು ಕಾರ್ಯ ಮಾಡಲಾಗಿದೆ. ಪ್ರತಿಮೆ ಪಕ್ಕದ ಜಾಗದಲ್ಲೇ ಈಗಾಗಲೇ ಪ್ರತಿಮೆ ನಿರ್ಮಾಣಕ್ಕೆ ಕಾಮಗಾರಿ ಆರಂಭವಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ ಎಂದು ಶಾಸಕ ಎಚ್.ಎಂ. ಬಾಲಕೃಷ್ಣ ತಿಳಿಸಿದ್ದಾರೆ.

ಈ ಹಿಂದೆ ಎನ್ಇಎಸ್ ಬಡಾವಣೆಯಲ್ಲಿ ಮಾಜಿ ಶಾಸಕ ಎ. ಮಂಜುನಾಥ್ ಸ್ಥಾಪಿಸಿದ್ದ ಗಾಂಧಿ ಪ್ರತಿಮೆಯನ್ನು ರಸ್ತೆ ಅಭಿವೃದ್ಧಿ ಹಿನ್ನೆಲೆಯಲ್ಲಿ ತೆರುವು ಮಾಡಲಾಗಿತ್ತು. ಆಗ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು. ಪೊಲೀಸ್ ಬಂದೋಬಸ್ತ್ನಲ್ಲಿ ಪ್ರತಿಮೆ ತೆರವು ಮಾಡಲಾಗಿತ್ತು. ಕೆಂಪೇಗೌಡ ಪ್ರತಿಮೆ ಕಾವಲಿಗೆ ಇಬ್ಬರು ಸಿಬ್ಬಂದಿಯನ್ನು ನೇಮಕ ಮಾಡಿದ್ದು, 24 ತಾಸು ನಿಗಾ ಇಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-14-1431334565

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.