ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕೃಷ್ಣ ವಿರುದ್ಧ ಅವಾಚ್ಯ ಶಬ್ದಗಳ ನಿಂದನೆ: ದೂರು

ದೂರು
Published 8 ಜೂನ್ 2024, 7:29 IST
Last Updated 8 ಜೂನ್ 2024, 7:29 IST
ಅಕ್ಷರ ಗಾತ್ರ

ಮಾಗಡಿ: ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜಿಲ್ಲಾ ಜೆಡಿಎಸ್ ಯುವ ಕಾರ್ಯಾಧ್ಯಕ್ಷ ಎಸ್.ವಿ.ಟಿ ವೆಂಕಟೇಶ್ ಎಂಬುವವರು ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಕೆಂಪೇಗೌಡ ದೂರು ನೀಡಿದ್ದಾರೆ.

ಈಚೆಗೆ ಶಾಸಕ ಬಾಲಕೃಷ್ಣ ತಮ್ಮ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸೋಲಿನ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ವೇಳೆ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡಿದ್ದರು. ಇದರ ವಿಡಿಯೊ ಜಾಲತಾಣದಲ್ಲಿ ಹರಿದಾಡಿತ್ತು.

ಇದಕ್ಕೆ ಪ್ರತಿಯಾಗಿ ಎಸ್.ವಿ.ಟಿ ವೆಂಕಟೇಶ್, ಶಾಸಕ ಬಾಲಕೃಷ್ಣ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದರಿಂದ ಅಭಿಮಾನಿಗಳು, ಅವರ ಬೆಂಬಲಿಗರಿಗೆ ಅಪಾರ ನೋವು ಆಗಿದೆ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT