ತಾಯಿ–ಮಕ್ಕಳ ಆಸ್ಪತ್ರೆ ನಿರ್ಮಾಣ
ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕೆಂಬ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಅದರ ಭಾಗವಾಗಿ ಹೊಸ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮಾಗಡಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಗತ್ಯವಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಹಳೆ ಆಸ್ಪತ್ರೆ ನೆಲಸಮಗೊಳಿಸಿ ತಾಯಿ, ಮಕ್ಕಳ ಅಸ್ಪತ್ರೆ ನಿರ್ಮಿಸಲಾಗುವುದು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಭರವಸೆ ನೀಡಿದರು.