ಮಾಗಡಿ: ಮಾಗಡಿ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 13 ಮತ ಪಡೆದ ಕಾಂಗ್ರೆಸ್ನ ಶಿವರುದ್ರಮ್ಮ ವಿಜಯಕುಮಾರ್ ನೂತನ ಅಧ್ಯಕ್ಷರಾಗಿ ಘೋಷಣೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ಶರತ್ ಕುಮಾರ್ ತಿಳಿಸಿದರು.

ಶನಿವಾರ ಪುರಸಭೆಯಲ್ಲಿ ಹೈಕೋರ್ಟ್ ನೀಡಿದ ಆದೇಶದಂತೆ ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ತಡೆಯಾಜ್ಞೆ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆ ಮಾಡಿರಲಿಲ್ಲ.

ಕೇವಲ 21 ದಿನಗಳ ಕಾಲ ಅಧಿಕಾರ ಇರುವುದರಿಂದ ದೊಡ್ಡ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುವುದಿಲ್ಲ. ಕಾಮಗಾರಿಗಳಿಗೆ ವೇಗ ನೀಡಲಾಗುವುದು ಎಂದರು.

ಪುರಸಭಾ ಉಪಾಧ್ಯಕ್ಷ ರಿಯಾಜ್ ಸದಸ್ಯರಾದ ಅಶ್ವಥ್, ಶಿವಕುಮಾರ್, ರಂಗಹನುಮಯ್ಯ, ರಹಮತ್, ಮುಖಂಡರಾದ ಮೂರ್ತಿ, ಮಂಜುನಾಥ್, ರೂಪೇಶ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.