ಎನ್ಇಎಸ್ ಬಡವಾಣೆ ಹತ್ತಿರ ನಿರ್ಮಾಣವಾಗುತ್ತಿರುವ ಗುರುಭವನ ಕಟ್ಟಡ ನೋಟ
ಮಾಗಡಿ ಪಟ್ಟಣದ ಎನ್ಇಎಸ್ ಬಡಾವಣೆಯ ಒಂದೇ ಸೂರಿನಡಿ ಎಲ್ಲಾ ಸರ್ಕಾರಿ ಕಟ್ಟಡಗಳು ಬರುವಂತೆ ಮಾಡಿ ಬಡಾವಣೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜೊತೆಗೆ ಆರು ಅಡಿ ಎತ್ತರದ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗುವುದು.
– ಎಚ್.ಸಿ.ಬಾಲಕೃಷ್ಣ, ಮಾಗಡಿ ಶಾಸಕ
ಶಾಸಕ ಎಚ್.ಸಿ.ಬಾಲಕೃಷ್ಣ ಅವರು ತಾಲ್ಲೂಕು ಕಚೇರಿ ಸ್ಥಳಾಂತರ ಮಾಡಲು ಸೂಚನೆ ನೀಡಿದ್ದು ಕಟ್ಟಡ ನೆಲಸಮ ಮಾಡುವ ಸಮಯದಲ್ಲಿ ತಾತ್ಕಾಲಿಕವಾಗಿ ಕಚೇರಿಯನ್ನು ಡಾ.ಶಿವಕುಮಾರ ಸ್ವಾಮೀಜಿ ಸಭಾಂಗಣಕ್ಕೆ ಸ್ಥಳಾಂತರಿಸಲಾಗುವುದು.
– ಶರತ್‌ಕುಮಾರ್, ತಹಶೀಲ್ದಾರ್ ಮಾಗಡಿ
ತಾಲ್ಲೂಕು ಕಚೇರಿ ಪ್ರಸ್ತುತ ಮಾಗಡಿ-ಬೆಂಗಳೂರು ಮುಖ್ಯ ರಸ್ತೆಯಲ್ಲಿದ್ದು ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ. ಈಗ ತಾಲ್ಲೂಕು ಕಚೇರಿಯನ್ನು ಎನ್ಇಎಸ್ ಬಡಾವಣೆಗೆ ಸ್ಥಳಾಂತರಿಸಿದರೆ ರೈತರಿಗೆ ತೊಂದರೆಯಾಗಲಿದೆ. ಈ ಬಗ್ಗೆ ಶಾಸಕರು ಮತ್ತೊಮ್ಮೆ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿದೆ.