ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಗಡಿ: ಆರೋಗ್ಯ ರಕ್ಷಾ ಸಮಿತಿ ಸಭೆ

Published 19 ಡಿಸೆಂಬರ್ 2023, 15:47 IST
Last Updated 19 ಡಿಸೆಂಬರ್ 2023, 15:47 IST
ಅಕ್ಷರ ಗಾತ್ರ

ಮಾಗಡಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಶಾಸಕ ಎಚ್‌.ಸಿ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು.

ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜ್ಞಾನಪ್ರಕಾಶ್‌ ಮಾತನಾಡಿ, ಆಸ್ಪತ್ರೆಯಲ್ಲಿ ಸರ್ಜನ್‌ ಮತ್ತು ಮಕ್ಕಳ ತಜ್ಞ ವೈದ್ಯರಿಲ್ಲದೆ ತೊಂದರೆಯಾಗಿದೆ. 27 ‘ಡಿ’ ಗ್ರೂಪ್‌ ನೌಕರರ ಹುದ್ದೆಗಳು ಖಾಲಿ ಇವೆ. ‘ಸಿ’ ಗ್ರೂಪ್‌ 6 ಹುದ್ದೆಗಳು ಖಾಲಿ ಇವೆ ಎಂದರು.

ಆಸ್ಪತ್ರೆಯಲ್ಲಿ ಒಳಚರಂಡಿ ಸಮಸ್ಯೆ ತಲೆನೋವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕವಿಲ್ಲದೆ ರೋಗಿಗಳು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಕುಡಿಯುವ ನೀರನ ಸಮಸ್ಯೆ ಹೇಳತೀರದಾಗಿದೆ. ಆಸ್ಪತ್ರೆ ಎಕ್ಸರೇ ಘಟಕದಲ್ಲಿ ವಿದ್ಯುತ್‌ ಸಂಪರ್ಕ ಸರಿಪಡಿಸಬೇಕು ಎಂದು ಮನವಿ ಮಾಡಿದರು.

ಆಢಳಿತಾಧಿಕಾರಿ ಮನವಿ ಆಲಿಸಿದ ಶಾಸಕ ಎಚ್‌.ಸಿ.ಬಾಲಕೃಷ್ಣ, ಶೀಘ್ರದಲ್ಲಿಯೇ ಶುದ್ಧ ಕುಡಿಯುವ ನೀರು ಒದಗಿಸಿ, ಒಳಚರಂಡಿ ವ್ಯವಸ್ಥೆ ಸರಿಪಡಿಸಿಕೊಡಲಾಗುವುದು. ಖಾಲಿ ಇರುವ ವೈದ್ಯರು ಮತ್ತು ಸಿಬ್ಬಂದಿ  ಹುದ್ದೆ ಭರ್ತಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. 

ತಾಲ್ಲೂಕು ಪಂಚಾಯಿತಿ ಇಒ ಚಂದ್ರ, ವೈದ್ಯರಾದ ಡಾ.ಆಶಾದೇವಿ, ಡಾ.ಯಶವಂತ್‌ಕುಮಾರ್‌, ಡಾ.ಮಂಜುಳಾ, ಡಾ.ನಾಗನಾಥ್‌, ಡಾ.ಫಾರೂಕ್‌ ಅಹಮದ್‌, ಡಾ.ಮುದಾಳೆ, ಡಾ.ಚಂದ್ರಿಕಾ, ಡಾ.ವಿಶ್ವನಾಥ್‌, ಆಂಜಿನಮ್ಮ, ಫಾರ್ಮಾಸಿಸ್ಟ್‌ ಗುಣಶೇಖರ್‌, ನರ್ಸಿಂಗ್‌ ಸೂಪರಿಂಟೆಂಡೆಟ್‌ ಪದ್ಮಾ ಹಾಗೂ ಆಸ್ಪತ್ರೆ ಸಿಬ್ಬಂದಿ, ಶುಶ್ರೂಷಕಿಯರು, ಪರೀಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT