ಮಾಗಡಿ: ಆನ್ಲೈನ್ನಲ್ಲಿ ರಿಯಾಯಿತಿ ದರದಲ್ಲಿ ಔಷಧ ಮಾರಾಟಕ್ಕೆ ಕಡಿವಾಣ ಹಾಕುವಂತೆ ಔಷಧಿ ವ್ಯಾಪಾರಿಗಳು ಬುಧವಾರ ಅರ್ಧ ದಿನ ಔಷಧಿ ಅಂಡಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು

ತಹಶೀಲ್ದಾರ್ ರಂಜಿತ್ ಮೂಲಕ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಔಷಧ ವ್ಯಾಪಾರಿಗಳ ಸಂಘದ ಸದಸ್ಯರು ಮನವಿ ಸಲ್ಲಿಸಿದರು. ದೇಶಾದ್ಯಂತ ಇರುವ 12.40 ಲಕ್ಷಕ್ಕೂ ಹೆಚ್ಚು ಔಷಧ ವ್ಯಾಪಾರಿಗಳು ಮತ್ತು ವಿತರಕರ ಹಿತಾಸಕ್ತಿ ಒಳಗೊಂಡಿದೆ ಎಂದು ಹೇಳಿದರು.

ದೇಶದಲ್ಲಿ ಯಾವುದೇ ಕಟ್ಟುನಿಟ್ಟಿನ ನಿಯಂತ್ರಣವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಆನ್ಲೈನ್ ಇ-ಫಾರ್ಮಸಿಗಳ ಕಾರ್ಯಾಚರಣೆಯನ್ನು ತಡೆಯಬೇಕು. ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಮಾರುಕಟ್ಟೆಯಲ್ಲಿ ನಡೆಸುತ್ತಿರುವ ದರ ಸಮರದಿಂದಾಗಿ ಸಣ್ಣ ಮತ್ತು ಸ್ವತಂತ್ರ ಔಷಧಿ ಅಂಗಡಿಗಳ ಉಳಿವು ಕಷ್ಟಕರವಾಗಿದೆ. ಆನ್ಲೈನ್ ಮೂಲಕ ಯಾವುದೇ ಕಟ್ಟುನಿಟ್ಟಿನ ತಪಾಸಣೆ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುತ್ತಿರುವುದರಿಂದ ರೋಗಿಗಳ ಸುರಕ್ಷತೆಗೆ ಭಾರಿ ಧಕ್ಕೆಯಾಗುತ್ತಿದೆ ಎಂದು ಸಂಘ ಕಳವಳ ವ್ಯಕ್ತಪಡಿಸಿದೆ.

ಆನ್ಲೈನ್ ಪ್ಲಾಟ್ಫಾರ್ಮ್ಗಳು ವೈದ್ಯರ ಚೀಟಿ ಇಲ್ಲದೆಯೇ ಸಾರ್ವಜನಿಕರಿಗೆ ನೇರವಾಗಿ ಔಷಧಿ ಮಾರಾಟ ಮಾಡುತ್ತಿದ್ದು, ಇದು ಔಷಧ ನಿಯಂತ್ರಣ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಸದಸ್ಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-14-1312143280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.