ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ‘ಕೋಮು ಹಿಂಸಾಚಾರ ತಡೆಗೆ ಕಠಿಣ ಕ್ರಮ ಕೈಗೊಳ್ಳಿ’

Published 11 ಆಗಸ್ಟ್ 2023, 8:00 IST
Last Updated 11 ಆಗಸ್ಟ್ 2023, 8:00 IST
ಅಕ್ಷರ ಗಾತ್ರ

ಮಾಗಡಿ: ದೇಶದಲ್ಲಿ ಕೋಮು ಸಾಮರಸ್ಯ ಕಾಪಾಡಲು ಹಾಗೂ ಮತೀಯ ಸಾಮರಸ್ಯ ಕದಡುವ ದುಷ್ಟಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸುರೇಂದ್ರಮೂರ್ತಿ.ಜಿ ಅವರಿಗೆ ಮನವಿ ಸಲ್ಲಿಸಿದರು.

ಎಸ್‌ಡಿಪಿಐ ಜಿಲ್ಲಾ ಕೌನ್ಸಿಲ್ ಸದಸ್ಯ ಚಾಂದಪಾಷಾ ಮಾತನಾಡಿ, ಮಣಿಪುರದಲ್ಲಿ ಬುಡಕಟ್ಟು ಜನಾಂಗಗಳ ನಡುವೆ ಮಾರಣಹೋಮ, ಹರಿಯಾಣದಲ್ಲಿ ಕೋಮುಗಲಭೆ, ಮಹಾರಾಷ್ಟ್ರದಲ್ಲಿ ಯೋಧನ ಕೋಮುದ್ವೇಶಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಹಿಂಸಾಚಾರ ತಾಂಡವವಾಡುತ್ತಿದೆ. ಸಂಘ ಪರಿವಾರ ಮತ್ತು ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದರು.

ಬಿಜೆಪಿಗೆ ಹಿಂಸಾಚಾರ, ಕೋಮು ದ್ವೇಷ ರಾಜಕೀಯ ಅಸ್ತ್ರವಾಗಿದೆ. ಮನ್‌ಕೀ ಬಾತ್‌ನಲ್ಲಿ ಗಂಟೆಗಟ್ಟಲೆ ಮಾತನಾಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೊತ್ತಿ ಉರಿಯುತ್ತಿರುವ ಮಣಿಪುರ ಹಿಂಸಾಚಾರದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನವನ್ನೇ ಮಾಡಲಿಲ್ಲ. ಮಣಿಪುರದಲ್ಲಿ ಕುಕಿ ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ್ದರೂ ಕೇಂದ್ರ ಸರ್ಕಾರ ಶಾಂತಿ ಸ್ಥಾಪನೆಗೆ ಮುಂದಾಗಲಿಲ್ಲ ಎಂದರು.

ಎಸ್‌ಡಿಪಿಐ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ಅಮ್ಜದ್‌ಪಾಷಾ, ತಾಲ್ಲೂಕು ಅಧ್ಯಕ್ಷ ಅನ್ಸರ್‌ ಪಾಷಾ, ಸೈಯದ್ ಜಬಿ, ನೂರುಲ್ಲಾ, ನವಾಜ್ ಬೇಗ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT