ಮಾಗಡಿ: ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತಾಲ್ಲೂಕಿನಲ್ಲಿ ರಾಗಿ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಶೇ60ರಷ್ಟು ರಾಗಿ ಖರೀದಿ ಮಾಡಲಾಗಿದೆ ಎಂದು ಕೇಂದ್ರದ ಅಧಿಕಾರಿ ಪ್ರಶಾಂತ್ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 1 ರಿಂದ ಡಿಸೆಂಬರ್ವರೆಗೆ ರಾಗಿ ಖರೀದಿಗೆ ರೈತರಿಂದ ನೋಂದಣಿ ಮಾಡಿಸಿಕೊಳ್ಳಲಾಗಿತ್ತು. ಇಲ್ಲಿವರೆಗೆ 7.158 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಪ್ರತಿ ರೈತರಿಂದ ಕನಿಷ್ಠ 5ಎಕರೆವರೆಗೆ 50 ಕ್ವಿಂಟಲ್ ರಾಗಿ ಖರೀದಿ ಮಾಡಲಾಗುತ್ತಿದೆ.

ಒಟ್ಟು 1.50 ಲಕ್ಷ ಕ್ವಿಂಟಲ್ ರಾಗಿ ನೋಂದಣಿಯಾಗಿದ್ದು, ಇಲ್ಲಿವರೆಗೆ 3.900 ರೈತರು 80 ಸಾವಿರ ಕ್ವಿಂಟಲ್ ರಾಗಿ ಮಾರಾಟ ಮಾಡಿದ್ದಾರೆ. ಇನ್ನೂ 60 ಸಾವಿರ ಕ್ವಿಂಟಲ್ ರಾಗಿ ರೈತರು ಮಾರಾಟ ಮಾಡುವ ನಿರೀಕ್ಷೆಯಿದೆ.

ಬೆಂಬಲ ಬೆಲೆ ಹೆಚ್ಚಳಒಂದು ಕ್ವಿಂಟಾಲ್ ರಾಗಿಗೆ ₹4,886 ಬೆಲೆ ನಿಗದಿಪಡಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ₹596 ಹೆಚ್ಚಳ ಮಾಡಲಾಗಿದೆ. ಇದು ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಪ್ರತಿ ಚೀಲಕ್ಕೆ ರೈತರು ₹8 ಪಾವತಿಸಬೇಕಾಗುತ್ತದೆ. ಖರೀದಿ ಹಣವನ್ನು ಸರ್ಕಾರದಿಂದ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.

ಖರೀದಿ ಕೇಂದ್ರ ಮತ್ತು ಸೌಲಭ್ಯ: ಈ ಬಾರಿ ರೈತರು ರಾಗಿ ಮಾರಾಟಕ್ಕಾಗಿ ಕಿ.ಮೀಗಟ್ಟಲೆ ಟ್ರ್ಯಾಕ್ಟರ್ನಲ್ಲಿ ಕಾಯುವ ಅವಶ್ಯ ಇರುವುದಿಲ್ಲ. ಪ್ರತಿದಿನ 39 ಟ್ರ್ಯಾಕ್ಟರ್ಗಳಿಗೆ ಮಾತ್ರ ಖರೀದಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಮರೂರು-ಕಲ್ಯ ಮುಖ್ಯ ರಸ್ತೆ ಬಳಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಮುಂದಿನ ವರ್ಷ ಮಾಗಡಿ ಪಟ್ಟಣದ ಹೊಸಪೇಟೆಯಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ವತಿಯಿಂದ ನಿರ್ಮಾಣಗೊಂಡಿರುವ ಗೋಡೌನ್ ಬಳಿ ಖರೀದಿ ಕೇಂದ್ರ ಆರಂಭವಾಗಲಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಸೋಲೂರು ಹೋಬಳಿ ಪ್ರಸ್ತುತ ನೆಲ ಮಂಗಲಕ್ಕೆ ಸೇರಿದ್ದು, ಮುಂದಿನ ವರ್ಷದಿಂದ ಮಾಗಡಿಯಲ್ಲೇ ಖರೀದಿಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.

ಖರೀದಿ ಕೇಂದ್ರದಲ್ಲಿ ರೈತರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲದಂತೆ ಉತ್ತಮ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-14-1047605351

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.