ಮಾಗಡಿ: ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಹಳೆ ಮೀಸಲಾತಿ ಪದ್ಧತಿಯಡಿಯಲ್ಲೇ ಸರ್ಕಾರಿ ನೌಕರರ ನೇಮಕಾತಿ ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಸಮುದಾಯಗಳ ವತಿಯಿಂದ ಬೆಂಗಳೂರಿನ ‘ಫ್ರೀಡಂ ಪಾರ್ಕ್ ಚಲೋ' ಪ್ರತಿಭಟನೆಗೆ ಬೆಂಬಲ ನೀಡಲಾಯಿತು.

ಪಟ್ಟಣದ ಕಲ್ಯಾಗೇಟ್ನಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಭೋವಿ ಸಮುದಾಯದ ಅಧ್ಯಕ್ಷ ಬಿ.ಟಿ.ವೆಂಕಟೇಶ, ವರದಿ ಪ್ರಕಾರ ಭೋವಿ ಸಮುದಾಯದ ಜನಸಂಖ್ಯೆಯನ್ನು ಅತ್ಯಲ್ಪ ಏರಿಕೆ ತೋರಿಸಿರುವುದು ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಎಂದು ಕಿಡಿಕಾರಿದರು.ಪುರಸಭೆ ಮಾಜಿ ಅಧ್ಯಕ್ಷ ನಾಗರಾಜು, ಟಿ.ಎ.ಪಿ.ಸಿ.ಎಂ.ಎಸ್ ಉಪಾಧ್ಯಕ್ಷ ರಾಜಣ್ಣ, ಚಂದೂರಾಯನಹಳ್ಳಿ ಶಿವರಾಮಯ್ಯ, ಯುವ ಮುಖಂಡರಾದ ಸಂಜೀವ ಮೂರ್ತಿ, ಪಾಂಡುರಂಗಯ್ಯ, ನಾಗಭೋವಿದೊಡ್ಡಿ ಮಂಜುನಾಥ, ಗಿರೀಶ್ ಸೇರಿದಂತೆ ಅನೇಕ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-14-1183781564

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.