ಮಾಗಡಿ: ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿಕ್ಕಾಗಿಯೇ ಜಿಲ್ಲಾಧಿಕಾರಿ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದಾರೆ.

ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಮತ್ತು ನೋ ಪಾರ್ಕಿಂಗ್ ವಲಯಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಲಾಗಿದೆ.

ರಾಮರಾಜ್ ಅರಸ್ (ಆರ್.ಆರ್) ರಸ್ತೆಯು ಪಟ್ಟಣದ ಮುಖ್ಯ ಸಂಪರ್ಕ ರಸ್ತೆ. ನಿತ್ಯವೂ ಅಂದಾಜು ಎರಡು ಸಾವಿರಕ್ಕೂ ಹೆಚ್ಚು ಜನರು ಇಲ್ಲಿ ಸಂಚರಿಸುತ್ತಾರೆ. ಆದರೆ, ಈ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಸ್ಥರು, ಸಾರ್ವಜನಿಕರು ತಮ್ಮ ಇಷ್ಟಬಂದಂತೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಿದೆ. ಕೆಲವೊಮ್ಮೆ ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ದಳದ ವಾಹನಗಳ ಸಂಚಾರಕ್ಕೂ ಇದು ಭಾರಿ ಅಡಚಣೆ ಸೃಷ್ಟಿಸುತ್ತಿತ್ತು. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕಠಿಣ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.

ಜಿಲ್ಲಾಧಿಕಾರಿ ಯಶ್ವಂತ್ ಜಿ., ಅವರು ಹೊರಡಿಸಿರುವ ಆದೇಶದಂತೆ ಮಾಗಡಿಯ ಡೂಮ್ ಟೈಲ್ ವೃತ್ತದಿಂದ ಕೆಂಪೇಗೌಡ ಸರ್ಕಲ್ವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ದಿನ ಬಿಟ್ಟು ದಿನದ ಆಧಾರದ ಮೇಲೆ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಡೂಮ್ ಲೈಟ್ ಸರ್ಕಲ್ನಿಂದ ಕೆಂಪೇಗೌಡ ಸರ್ಕಲ್ವರೆಗೆ (ಎಡ ಭಾಗದಲ್ಲಿ ಸುಮಾರು 250 ಮೀಟರ್) ಭಾನುವಾರ, ಮಂಗಳವಾರ, ಗುರುವಾರ ಮತ್ತು ಶನಿವಾರ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ. ಬಲಭಾಗದಲ್ಲೂ ಸುಮಾರು 250 ಮೀಟರ್ ದೂರ ಸೋಮವಾರ, ಬುಧವಾರ, ಶುಕ್ರವಾರ ವಾಹನ ನಿಲುಗಡೆ ಮಾಡಬಹುದಾಗಿದೆ.

ದಂಡ: ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಈ ನಿಯಮವನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕಿದೆ. ನಿಯಮ ಉಲ್ಲಂಘಿಸಿ ‘ನೋ ಪಾರ್ಕಿಂಗ್’ ವಲಯದಲ್ಲಿ ಅಥವಾ ನಿಗದಿಪಡಿಸದ ದಿನಗಳಂದು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ಅಂತಹ ವಾಹನ ಮಾಲೀಕರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಿ ದಂಡ ವಿಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-14-1612779165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.