ಮಾಗಡಿ: ಕಳೆದ ಹತ್ತು ವರ್ಷಗಳಿಂದ ಜನರಿಗೆ ನೀರಿನ ಬಿಲ್ ನೀಡದೆ ಬಾಕಿ ಉಳಿಸಿಕೊಂಡಿದ್ದ ಪುರಸಭೆ ಈಗ ಏಕಾಏಕಿ ₹10 ರಿಂದ ₹13 ಸಾವಿರದವರೆಗೆ ನೀರಿನ ಕರ ವಿಧಿಸುವ ಮೂಲಕ ಸಾರ್ವಜನಿಕರಿಗೆ ಆಘಾತ ನೀಡಿದೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಪ್ರಸಾದ್ ಗೌಡ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ನೀರಿನ ಕರದ ಬಿಲ್ ಪ್ರತಿಗಳನ್ನು ಪ್ರದರ್ಶಿಸಿ ಮಾತನಾಡಿದ ಅವರು, ಹತ್ತು ವರ್ಷದಿಂದ ಪುರಸಭೆ ಸಿಬ್ಬಂದಿ ಏನು ಮಾಡುತ್ತಿದ್ದರು? ನೀರಿನ ಕರ ಏಕೆ ವಸೂಲಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಬಾಕಿ ನೀರಿನ ಕರ ಪಾವತಿಸದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸುವುದಾಗಿ ಪುರಸಭೆ ಸಿಬ್ಬಂದಿ ಜನರನ್ನು ಹೆದರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಬಡವರು ಒಂದೇ ಬಾರಿಗೆ ಪಾವತಿಸಲು ಸಾಧ್ಯವೇ ಎಂದು ಕೇಳಿದರು.

ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಪುರಸಭೆ ಮುಖ್ಯಧಿಕಾರಿ ಮಧ್ಯಪ್ರವೇಶಿಸಿ ಬಾಕಿ ಕರ ಮನ್ನಾ ಮಾಡಬೇಕು. ಇಲ್ಲದಿದ್ದರೆ ಪುರಸಭೆ ಮುಂದೆ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿಯ ರಾಜೇಶ್, ರಾಘವೇಂದ್ರ, ಶಶಿ, ನಿಜಗುಣ, ಶ್ರೀಧರ್, ನಾರಾಯಣ್ ಸ್ವಾಮಿ, ಜಯರಾಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-14-1837065484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.