ರಾಮನಗರ: ನನಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಪಾರದರ್ಶಕ, ಆದರ್ಶ ಆಡಳಿತ ನೀಡುತ್ತೇನೆ. ಹಾಗೊಂದು ವೇಳೆ ಅದರಲ್ಲಿ ವಿಫಲವಾದರೆ 6 ತಿಂಗಳ ಬಳಿಕನಾನೇ ಅಧಿಕಾರದಿಂದ ಕೆಳಗೆ ಇಳಿಯುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಹೇಳಿದರು.

ಇಲ್ಲಿನ ಜಿಲ್ಲಾ ಸಂಕೀರ್ಣದ ಮುಂಭಾಗ ಬೆಂಬಲಿಗರೊಂದಿಗೆ ಬಸವ ಜಯಂತಿ ಆಚರಿಸಿ ಅವರು ಮಾತನಾಡಿದರು. ನಾನು 5 ಬಾರಿ ಶಾಸಕ, ವಿಧಾನ ಪರಿಷತ್ ಸದಸ್ಯನಾಗಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೀಗಾಗಿ ಅಧಿಕಾರ ಸಿಗಲಿಲ್ಲ. ಇಂದು ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಮುಖ್ಯಮಂತ್ರಿ, ಸಚಿವರು ಯಾರೊಬ್ಬರೂ ಪ್ರಾಮಾಣಿಕರಾಗಿಲ್ಲ. ಹೀಗಾಗಿ 6 ತಿಂಗಳು ನನಗೆ ಅಧಿಕಾರ ಕೊಡಿ ಎಂದು ಆಗ್ರಹಿಸಿದರು.

ಚಾಮರಾಜನಗರ ಸೇರಿದಂತೆ ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಪರಿಹಾರ ವಿತರಿಸಬೇಕು. 3 ತಿಂಗಳ ಕಾಲ ಎಲ್ಲಾ ನಾಗರಿಕರ ವಿದ್ಯುತ್ ಮತ್ತು ನೀರಿನ ಬಿಲ್ ರದ್ದು ಮಾಡಬೇಕು. ಸಾಲ ಮರುಪಾವತಿ ಮತ್ತು ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.