ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಕುಳಿತಲ್ಲಿಯೇ ಸಾವು

Published 7 ಫೆಬ್ರುವರಿ 2024, 7:58 IST
Last Updated 7 ಫೆಬ್ರುವರಿ 2024, 7:58 IST
ಅಕ್ಷರ ಗಾತ್ರ

ಚನ್ನಪಟ್ಟಣ: ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಳಿತಲ್ಲಿಯೇ ಸಾವನ್ನಪ್ಪಿದ್ದಾರೆ.

ತಾಲ್ಲೂಕಿನ ಚನ್ನಂಕೇಗೌಡನದೊಡ್ಡಿ ಗ್ರಾಮದ ವಿನೋದ್‌ (35) ಮೃತಪಟ್ಟವರು. ಇವರು ಬೆಂಗಳೂರಿನ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದು, ಪ್ರತಿದಿನ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಎಂದಿನಂತೆ ಮಂಗಳವಾರ ಕೆಲಸಕ್ಕೆಂದು ತೆರಳಲು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್ ಏರಿ ಕುಳಿತಿದ್ದಾರೆ. ಬಸ್ ನಿಲ್ದಾಣದಿಂದ ಹೊರಟು ಸ್ವಲ್ಪ ದೂರ ಹೋಗುವಷ್ಟರಲ್ಲಿ ಸೀಟಿನಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಸಹ ಪ್ರಯಾಣಿಕರು ಇವರನ್ನು ರಸ್ತೆ ಬದಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಿ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ. ಆ ನಂತರ ನಗರದ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.

ಇವರಿಗೆ ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT