ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಗುರುವಾರ ನಾಮಪತ್ರ ಸಲ್ಲಿಸುವುದಕ್ಕೆ ಮುಂಚೆ, ನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪತ್ನಿ ಅನಸೂಯ ಅವರೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಬಿಜೆಪಿ ಶಾಸಕರಾದ ಮುನಿರತ್ನ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಎಂ. ಕೃಷ್ಣಪ್ಪ, ವಕ್ತಾರ ಅಶ್ವತ್ಥ ನಾರಾಯಣಗೌಡ ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರು ಮಂಜುನಾಥ್ ಅವರಿಗೆ ಸಾಥ್ ನೀಡಿದರು