ರಾಮನಗರ: ಪೌರ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಕಾಯ್ದಿರಿಸಿರುವ ಶೇ 24.10 ಅನುದಾನವನ್ನು ನಗರಸಭೆ ಹಾಗೂ ಪುರಸಭೆಗಳಲ್ಲಿ ಸರಿಯಾಗಿ ಬಳಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಕ್ಕೆ, ಉಪ ವಿಭಾಗ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ನಗರದ ಮಿನಿ ವಿಧಾನಸೌಧದಲ್ಲಿರುವ ಉಪ ವಿಭಾಗಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಉಪ ವಿಭಾಗಾಧಿಕಾರಿ ಬಿನೋಯ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಮಿತಿ ಸದಸ್ಯ ಆರ್. ನಾಗರಾಜು ಅನುದಾನ ಸರಿಯಾಗಿ ಬಳಕೆಯಾಗದಿರುವ ಬಗ್ಗೆ ಪ್ರಸ್ತಾಪಿಸಿದರು.

‘ಅನುದಾನದಲ್ಲಿ ಪೌರ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ, ಕೌಶಲ ತರಬೇತಿ, ಕಾರ್ಮಿಕರಿಗೆ ಜೀವವಿಮೆ, ಸಮಗ್ರ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕೊಡಲು ಅವಕಾಶವಿದೆ. ಆದರೆ, ಸ್ಥಳೀಯ ಸಂಸ್ಥೆಗಳಲ್ಲಿ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿವೆ. ಇದರಿಂದಾಗಿ ಕಲ್ಯಾಣಕ್ಕೆ ಅನುದಾನವಿದ್ದರೂ ಅದು ಸರಿಯಾಗಿ ಬಳಕೆಯಾಗುತ್ತಿಲ್ಲ’ ಎಂದು ಅಸಮಾಧಾನ ಹೊರ ಹಾಕಿದರು.

ಅದಕ್ಕೆ ಪ್ರತಿಕ್ರಿಯಿಸಿದ ಬಿನೋಯ್, ‘ಸ್ವಚ್ಛತಾ ಕಾರ್ಯದ ಮೂಲಕ ಸಮಾಜದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗಾಗಿ ಕಾಯ್ದಿರಿಸಿರುವ ಅನುದಾನವನ್ನು ಅವರ ಕಲ್ಯಾಣಕ್ಕಾಗಿ ಬಳಸುವುದು ಕಡ್ಡಾಯ. ಈ ವಿಷಯದಲ್ಲಿ ಅಧಿಕಾರಿಗಳು ಬೇಜವಾಬ್ದಾರಿತನ ತೋರುವುದು ಸರಿಯಲ್ಲ’ ಎಂದರು.

ಅನುದಾನ ಬಳಕೆ ಕುರಿತು ಸಭೆಗೆ ಮಾಹಿತಿ ಒದಗಿಸದ ಕನಕಪುರ ನಗರಸಭೆ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಅವರು, ಸಭೆಗೆ ಗೈರಾಗಿದ್ದ ಹಾರೋಹಳ್ಳಿ ಪುರಸಭೆ ಅಧಿಕಾರಿಗಳ ವಿರುದ್ಧ ‘ಅವರೇನು ರಿಪಬ್ಲಿಕ್ ಹಾರೋಹಳ್ಳಿ ಅಂದುಕೊಂಡಿದ್ದಾರಾ?’ ಎಂದು ಕಿಡಿಕಾರಿದರು. ಸಭೆಗೆ ಹಾಜರಾಗದಿದ್ದಕ್ಕೆ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಕುಮಾರ್ ಅವರಿಗೆ ಸೂಚಿಸಿದರು.

ಚುಚ್ಚುಮದ್ದು ನೀಡಲು ಸೂಚನೆ: ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಕೂಡಲೇ ಅವರಿಗೆ ಹೆಪಟೈಟಿಸ್–ಬಿ ಚುಚ್ಚುಮದ್ದು ನೀಡಬೇಕು. ಆರೋಗ್ಯ ಇಲಾಖೆಯು ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಿಗದಿತ ಅವಧಿಯೊಳಗೆ ಚುಚ್ಚುಮದ್ದು ನೀಡಿ, ಮುಂದಿನ ಸಭೆಗೆ ಅಗತ್ಯ ದಾಖಲೆ ಸಲ್ಲಿಸಬೇಕು ಎಂದು ಉಪ ವಿಭಾಗಾಧಿಕಾರಿ ನಿರ್ದೇಶನ ನೀಡಿದರು.

ನಿವೇಶನ ರಹಿತ ಪೌರ ಕಾರ್ಮಿಕರಿಗೆ ಆಶ್ರಯ ಯೋಜನೆಯಡಿ, ನಿವೇಶನಗಳನ್ನು ವಿತರಿಸಲು ಜಾಗ ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಕೇವಲ ಪೌರ ಕಾರ್ಮಿಕರಿಗೆ ಮಾತ್ರವಲ್ಲದೆ, ಬೇರೆಯವರಿಗೂ ವಿತರಿಸಲಾಗುವುದು. ಆ ಮೂಲಕ, ಪೌರ ಕಾರ್ಮಿಕರನ್ನು ಪ್ರತ್ಯೇಕವಾಗಿಡದೆ, ಎಲ್ಲರೊಂದಿಗೆ ಬೆರೆತು ಬದುಕುವಂತೆ ಮಾಡಲು ಮುಂದಾಗಿದ್ದೇವೆ. ಇದಕ್ಕೆ, ಕಾರ್ಮಿಕ ಮುಖಂಡರು ಸಹ ಸಹಕರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಸ್ಪತ್ರೆಯ ಡಿ.ಎಸ್ ಡಾ. ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ರಾಮನಗರ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಪುಟ್ಟಸ್ವಾಮಿ, ಬಿಡದಿ ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ, ಕನಕಪುರ ನಗರಸಭೆ, ಮಾಗಡಿ ಪುರಸಭೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಇತರರು ಇದ್ದರು.

ಸ್ವಚ್ಛತಾ ವಾಹನಗಳಿಗಿಲ್ಲ ವಿಮೆ!

ನಗರಸಭೆ ಮತ್ತು ಪುರಸಭೆಗಳಲ್ಲಿರುವ ಕಸ ಸಂಗ್ರಹ ಸೇರಿದಂತೆ ಇತರ ವಾಹನಗಳಿಗೆ ವಿಮೆ ಮತ್ತು ಅರ್ಹತಾ ಪ್ರಮಾಣಪತ್ರವಿಲ್ಲದಿರುವ ವಿಷಯದ ಕುರಿತು ಬಿಸಿ ಬಿಸಿ ಚರ್ಚೆ ನಡೆಯಿತು. ಈ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಲ್ಲಿಸಿದ ಪ್ರಮಾಣಪತ್ರ ಕಂಡು ಉಪ ವಿಭಾಗಾಧಿಕಾರಿ ಶಾಕ್ ಆದರು. ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ ಸಮಿತಿ ಸದಸ್ಯ ನಾಗರಾಜು ಕರ್ತವ್ಯದ ಸಂದರ್ಭದಲ್ಲಿ ವಾಹನಗಳು ಅಪಘಾತಕ್ಕೀಡಾದರೆ ಏನು ಗತಿ? ಎಂದು ಆತಂಕ ವ್ಯಕ್ತಪಡಿಸಿದರು. ನಿರ್ಲಕ್ಷ್ಯಕ್ಕಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉಪ ವಿಭಾಗಾಧಿಕಾರಿ ‘ಕೂಡಲೇ ವಾಹನಗಳಿಗೆ ವಿಮೆ ಮಾಡಿಸಿ ಅರ್ಹತಾ ಪ್ರಮಾಣಪತ್ರ ಪಡೆಯಬೇಕು’ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.