ಸೋಮವಾರ, ಆಗಸ್ಟ್ 15, 2022
23 °C

ಬೆಟ್ಟೇಗೌಡನದೊಡ್ಡಿಯಲ್ಲಿ ರೈತರೊಬ್ಬರ ಮನೆ ಹಿತ್ತಲಿನಲ್ಲಿ ಗಾಂಜಾ ಗಿಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಬೆಟ್ಟೇಗೌಡನದೊಡ್ಡಿಯಲ್ಲಿ ರೈತರೊಬ್ಬರು ಮನೆ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ವಶಪಡಿಸಿಕೊಂಡರು. 

ಮೂಗೇಗೌಡ  ಎಂಬುವರು ಗಾಂಜಾ ಬೆಳೆದಿದ್ದು ತಲೆಮರೆಸಿಕೊಂಡಿದ್ದಾರೆ. ಕೋಡಿಹಳ್ಳಿ ಸಬ್‌ ಇನ್‌ಸ್ಪೆಕ್ಟರ್‌ ನಂಜುಂಡಸ್ವಾಮಿ ಮತ್ತು ‌ ಸಿಬ್ಬಂದಿ ದಾಳಿ ನಡೆಸಿದ್ದು ತಲೆಮರೆಸಿಕೊಂಡಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸಿಡಿಪಿಒ ಮಂಜುನಾಥ ಸಮಕ್ಷಮದಲ್ಲಿ ಗಾಂಜಾ ಬೆಳೆದಿದ್ದ ಸ್ಥಳವನ್ನು ಪರಿಶೀಲನೆ ನಡೆಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು