ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾಹಿತ ಬಾಲಕಿ ಅನುಮಾನಾಸ್ಪದ ಸಾವು: ಪತಿ ವಶಕ್ಕೆ

Published 29 ಮಾರ್ಚ್ 2024, 21:43 IST
Last Updated 29 ಮಾರ್ಚ್ 2024, 21:43 IST
ಅಕ್ಷರ ಗಾತ್ರ

ಕನಕಪುರ: ಹದಿನಾರು ವರ್ಷದ ವಿವಾಹಿತ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಘಟನೆ ಕುರಿತು ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ಬಾಲಕಿ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಲ ತಾಲ್ಲೂಕಿನ ಬಾಲಕಿ 13 ವರ್ಷವಿದ್ದಾಗ 20 ವರ್ಷದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಸದ್ಯ ದಂಪತಿಗೆ ಹೆಣ್ಣು ಮಗು ಇದೆ.

ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಕುರಿತು ಸ್ಥಳೀಯರು ಮಕ್ಕಳ ಸಹಾಯವಾಣಿಗೆ ದೂರು ಕೊಟ್ಟಿದ್ದಾರೆ. ಆ ಮೇರೆಗೆ ಸಹಾಯವಾಣಿ ಕೇಂದ್ರದ ಸಂಯೋಜಕ ಹಾಗೂ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರು ಬಾಲಕಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಮೂರು ವರ್ಷದ ಹಿಂದೆಯೇ ಬಾಲ್ಯವಿವಾಹವಾಗಿರುವ ಸಂಗತಿ ಗೊತ್ತಾಗಿದೆ.

ಅನಾರೋಗ್ಯದಿಂದಾಗಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ಪತಿ ತನ್ನ ಸಾಕುತಾಯಿಗೆ ಕರೆ ಮಾಡಿ ತಿಳಿಸಿದ್ದಾನೆ. ಮನೆಗೆ ಬಂದು ನೋಡಿದಾಗ ಪತ್ನಿ ಮೃತಪಟ್ಟಿದ್ದಳು ಎಂದು ಕುಟುಂಬದವರು ತಿಳಿಸಿದ್ದಾರೆ. ಆತ ಕೂಡ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿರುವುದಾಗಿ ಹೇಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದರು.

ಬಾಲಕಿ ಸಾವಿನ ಕುರಿತು ಅನುಮಾನ ಇರುವುದರಿಂದ ದಯಾನಂದ ಸಾಗರ್‌ ಆಸ್ಪತ್ರೆಯಲ್ಲಿ ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಪತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT