ರಾಮನಗರ: ಡಾನ್ ಬಾಸ್ಕೊ ಯುವ ಮಾರ್ಗ ಸಂಸ್ಥೆ ವತಿಯಿಂದ ನಗರದ ರೈಲ್ವೆ ನಿಲ್ದಾಣ, ಸರ್ಕಾರಿ ಬಸ್ ನಿಲ್ದಾಣ ಹಾಗೂ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

‘18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಬೇಕು. ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಚುನಾವಣಾ ಪ್ರಕ್ರಿಯೆ ಜೀವಾಳವಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಈ ವ್ಯವಸ್ಥೆಯನ್ನು ಸದೃಢಗೊಳಿಸಬೇಕು’ ಎಂದು ಸಾಹಿತಿ ಅಬ್ಬೂರು ಎಂ. ಶ್ರೀನಿವಾಸ್ ತಿಳಿಸಿದರು.

ಸಂಸ್ಥೆಯ ಸಂಯೋಜಕ ವಿ. ರವಿ ಮಾತನಾಡಿ,, ಯಾವುದೇ ಸ್ವರೂಪದ ಚುನಾವಣಾ ಅಕ್ರಮ ಗಮನಕ್ಕೆ ಬಂದರೆ ಸಾರ್ವಜನಿಕರು ಮಾಹಿತಿ ಒದಗಿಸಲು, ಚುನಾವಣಾಣಾ ಆಯೋಗವು cVIGIL ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿದೆ. ನಾಗರಿಕರು ಗೂಗಲ್ ಪ್ಲೇಸ್ಟೋರ್ ಅಥವಾ ಚುನಾವಣಾ ಆಯೋಗದ ವೆಬ್ ಸೈಟ್ ceokarnataka.kar.nic.in ಮೂಲಕ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕು. ಈ ಆ್ಯಪ್‌ನ ಮೂಲಕವು ದೂರು ನೀಡಬಹುದು ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕ ಜಾನ್ ಪೀಟರ್, ಸಿಬ್ಬಂದಿಯಾದ ಲೋಕೇಶ್, ಸತೀಶ್, ಶಿಲ್ಪ, ಸೌಭಾಗ್ಯ, ಕಿರಣ್ ರಾಜ್, ಗಾಯಿತ್ರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.