ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ | ಕ್ರಿಕೆಟ್: ಪೊಲೀಸ್ ತಂಡಕ್ಕೆ ಟ್ರೋಫಿ

ಆರ್‌ಎಂಜಿ ಮೀಡಿಯಾ ಕಪ್: ಬೆಸ್ಕಾಂ ತಂಡ ರನ್ನರ್ ಅಪ್
Published 24 ಜನವರಿ 2024, 7:28 IST
Last Updated 24 ಜನವರಿ 2024, 7:28 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲಾ ದೃಶ್ಯ ಮಾಧ್ಯಮವು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಆರ್‌ಎಂಜಿ ಮೀಡಿಯಾ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ತಂಡವು ಬೆಸ್ಕಾಂ ತಂಡವನ್ನು ಮಣಿಸಿ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು. ತೀವ್ರ ಪೈಪೋಟಿ ನೀಡಿದ ಬೆಸ್ಕಾಂ ತಂಡ ರನ್ನರ್ ಅಪ್ ಆಯಿತು.

ಪೊಲೀಸ್ ತಂಡದ ಪುನೀತ್ ಟೂರ್ನಿಯ ಶ್ರೇಷ್ಠ ಆಟಗಾರ, ಗಿರೀಶ್ ಉತ್ತಮ ಬ್ಯಾಟ್ಸ್‌ಮನ್‌ ಹಾಗೂ ಪುನೀತ್ ಶ್ರೇಷ್ಠ ಬೌಲರ್ ಗೌರವಕ್ಕೆ ಪಾತ್ರರಾದರು. ಗಣ್ಯರು ಅವರಿಗೆ ವೈಯಕ್ತಿಕ ಟೋಫಿಗಳನ್ನು ಸ್ವೀಕರಿಸಿದರು.

ವಿಜೇತ ತಂಡಕ್ಕೆ ಟ್ರೋಫಿ ವಿತರಿಸಿ ಮಾತನಾಡಿದ ರಾಮನಗರ ಡಿವೈಎಸ್ಪಿ ದಿನಕರ ಶೆಟ್ಟಿ, ‘ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ, ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವುದು ಮುಖ್ಯ. ಕ್ರಿಕೆಟ್ ನೆಪದಲ್ಲಿ ವಿವಿಧ ಇಲಾಖೆಗಳನ್ನು ಒಂದೆಡೆ ಸೇರಿಸಿದ ದೃಶ್ಯ ಮಾಧ್ಯಮದವರು ಎಲ್ಲರನ್ನೂ ಬೆಸೆದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜೇತ ಪೊಲೀಸ್ ತಂಡದ ನಾಯಕ ಇನ್‌ಸ್ಪೆಕ್ಟರ್ ರವಿಕುಮಾರ್ ಮಾತನಾಡಿ, ‘ತಂಡದ ಆಟಗಾರರು ಪ್ರತಿ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರು. ಇದು ಪಂದ್ಯದಿಂದ ಪಂದ್ಯಕ್ಕೆ ನಮ್ಮ ಉತ್ಸಾಹ ಮತ್ತು ಟ್ರೋಫಿ ಗೆಲ್ಲುವ ಆತ್ಮವಿಶ್ವಾಸವನ್ನು ಹೆಚ್ಚಿಸಿತು. ಫೈನಲ್ ಪಂದ್ಯದಲ್ಲಿ ಎದುರಾಳಿ ಬೆಸ್ಕಾಂ ತಂಡವನ್ನು ಮಣಿಸಲು ಸಾಧ್ಯವಾಯಿತು’ ಎಂದು ಸಂತಸ ವ್ಯಕ್ತಪಡಿಸಿದರು.

ಜ. 20 ಮತ್ತು 21ರಂದು ನಡೆದ ಟೂರ್ನಿಯಲ್ಲಿ ಸರ್ಕಾರಿ ನೌಕರರ ಸಂಘದ ತಂಡ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯಿತಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಬೆಸ್ಕಾಂ, ಪೋಲೀಸ್ ಹಾಗೂ ವಿದ್ಯುನ್ಮಾನ ಮಾಧ್ಯಮ ತಂಡಗಳು ಭಾಗವಹಿಸಿದ್ದವು.

ಟ್ರೋಫಿ ವಿತರಣೆ ಸಮಾರಂಭದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ನರಸಿಂಹಮೂರ್ತಿ, ಗ್ರಾಮಾಂತರ ಇನ್‌ಸ್ಪೆಕ್ಟರ್ ರಮೇಶ್, ಸೈಬರ್ ಠಾಣೆ ಇನ್‌ಸ್ಪೆಕ್ಟರ್ ಪುಟ್ಟೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಸತೀಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಸೂರ್ಯಪ್ರಕಾಶ್, ಪ್ರಧಾನ ಕಾರ್ಯದರ್ಶಿ ಶಿವರಾಜ್, ಟೂರ್ನಿ ಆಯೋಜಕರಾದ ವಿದ್ಯುನ್ಮಾನ ಮಾಧ್ಯಮ ತಂಡದ ಪ್ರವೀಣ್ ಮತ್ತು ತಂಡದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT