ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಮಾ. 12ರಂದು ಮೆಗಾ ಲೋಕ ಅದಾಲತ್‌

Last Updated 2 ಫೆಬ್ರುವರಿ 2022, 2:56 IST
ಅಕ್ಷರ ಗಾತ್ರ

ರಾಮನಗರ: ಇದೇ 12ರಂದು ಜಿಲ್ಲೆಯ ವಿವಿಧ ನ್ಯಾಯ ಪೀಠಗಳಲ್ಲಿ ಮೆಗಾ ಲೋಕ ಅದಾಲತ್‌ ನಡೆಯಲಿದ್ದು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶೆ ಬಿ.ಜಿ. ರಮಾ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ 20 ನ್ಯಾಯಪೀಠಗಳಲ್ಲಿ ಏಕಕಾಲಕ್ಕೆ ಈ ಅದಾಲತ್‌ ನಡೆಯಲಿದೆ. ಕಕ್ಷಿದಾರರು ಹಾಗೂ ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಹುದು. ಇಲ್ಲವೇ ಆನ್‌ಲೈನ್‌ ಮೂಲಕವೂ ಹಾಜರಾಗಬಹುದು
ಎಂದಿದ್ದಾರೆ.

ರಾಜಿ ಪ್ರಕರಣಗಳು: ಜಿಲ್ಲೆಯಲ್ಲಿ ಒಟ್ಟು 45,318 ಪ್ರಕರಣಗಳು ಬಾಕಿ ಇದ್ದು, ಇವುಗಳ ಪೈಕಿ ವಿವಿಧ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ತಿಳಿಸಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಕ್ರಿಮಿನಲ್ ಪ್ರಕರಣಗಳು, ನೆಗೋಷಲ್ ಇನ್ಸ್ಟ್ರೂಮೆಂಟ್ ಕಾಯ್ದೆ, ಸಾಲ ವಸೂಲಾತಿ, ಬ್ಯಾಂಕ್ ಸಾಲ ವಸೂಲಾತಿ, ಮೋಟಾರು ವಾಹನ ಅಪಘಾತ, ಕಾರ್ಮಿಕ ವಿವಾದ, ಗಣಿ ಮತ್ತು ಭೂ ವಿಜ್ಞಾನ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ, ಆಸ್ತಿ ವಿಭಾಗ, ಹಕ್ಕು ಘೋಷಣೆ, ಶಾಶ್ವತ ನಿರ್ಭಂದಕಾಜ್ಞೆ ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT