ಶುಕ್ರವಾರ, ಜುಲೈ 1, 2022
22 °C

ಮೇಕೆದಾಟು: ಎರಡನೇ ಹಂತದ ಪಾದಯಾತ್ರೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ‌ ಭಾನುವಾರ ಇಲ್ಲಿನ ಟಿ.ಆರ್.‌ ಮಿಲ್ ಮೈದಾನದಲ್ಲಿ ಚಾಲನೆ ನೀಡಿದರು.

ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.‌ ಹರಿಪ್ರಸಾದ್, ಮುಖಂಡರಾದ ರಾಮಲಿಂಗ ರೆಡ್ಡಿ, ಸತೀಶ ಜಾರಕಿಹೊಳಿ, ಧ್ರುವನಾರಾಯಣ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಎಚ್.ಕೆ.‌ ಪಾಟೀಲ, ಆದಿಚುಂಚನಗಿರಿ ಶಾಖಾ‌ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಎರಡು ಗಂಟೆ ತಡವಾಗಿ ಕಾರ್ಯಕ್ರಮ ಆರಂಭ ಆಗಿದೆ. ವೇದಿಕೆ ಕಾರ್ಯಕ್ರಮದ ಬಳಿಕ ಇಲ್ಲಿಂದ ಬಿಡದಿಯತ್ತ ಪಾದಯಾತ್ರೆ ಸಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು