ಚನ್ನಪಟ್ಟಣ: ಮೇಕೆದಾಟು ಯೋಜನೆಗೆ ಶೀಘ್ರವೇ ಅಡಿಗಲ್ಲು ಹಾಕಬೇಕು. ಸತ್ತೇಗಾಲ ಯೋಜನೆ ಪೂರ್ಣ ಮಾಡಬೇಕು. ಕಾಡಾನೆಗಳ ದಾಳಿ ತಪ್ಪಿಸಬೇಕು. ಸರ್ಕಾರಿ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸ್ಪನ್ ಸಿಲ್ಕ್ ಮಿಲ್ ಮುಂಭಾಗದಿಂದ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೈಕ್, ಆಟೊ ಮೂಲಕ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ತಾಲ್ಲೂಕು ಕಚೇರಿ ತಲುಪಿ ಅದರ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು.

ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಸರ್ಕಾರ ಅಧಿಕಾರದ ಗದ್ದುಗೆ ಕಿತ್ತಾಟ ಬದಿಗಿಟ್ಟು, ರಾಜ್ಯದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು. ನೀರಾವರಿ ಯೋಜನೆಗಳಾದ ಮೇಕೆದಾಟು, ಸತ್ತೇಗಾಲ ಯೋಜನೆಗಳನ್ನು ಪೂರ್ಣ ಮಾಡುವ ಜೊತೆಗೆ ಮಿತಿ ಮೀರಿರುವ ಕಾಡಾನೆಗಳ ದಾಳಿ ತಡೆಗಟ್ಟಿ ರೈತರ ಬೆಳೆ ಉಳಿಸಬೇಕು. ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಇದಲ್ಲದೆ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ಸೋಸಿ ಪ್ರಕಾಶ್ ಮಾತನಾಡಿ, ಮೇಕೆದಾಟು ಯೋಜನೆಯಿಂದ ಆರು ಜಿಲ್ಲೆಗಳಿಗೆ ಕೃಷಿ ಮತ್ತು ಕುಡಿಯುವ ನೀರಿನ ಜೊತೆಗೆ ವಿದ್ಯುತ್ ಉತ್ಪಾದನೆಗೆ ಅನುಕೂಲ ಆಗಲಿದೆ. ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ ರಾಜ್ಯದ ಪರ ತೀರ್ಪು ನೀಡಿದೆ. ಈ ಯೋಜನೆಯನ್ನು ಶೀಘ್ರ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ರಾಮಲಿಂಗಯ್ಯ, ವೇದಿಕೆ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಉಮಾಶಂಕರ್, ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ಗೌಡ ಇತರರು ಮಾತನಾಡಿದರು. ನಂತರ ಪ್ರತಿಭಟನಾಕಾರರು ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.

ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ಸಾರ್ವಜನಿಕ ವಿದ್ಯಾಸಂಸ್ಥೆ ಸಿ.ಸಿ.ಚನ್ನಪ್ಪ, ನಿವೃತ್ತ ಉಪಪ್ರಾಂಶುಪಾಲ ಟಿ.ಆರ್.ರಂಗಸ್ವಾಮಿ, ನಿವೃತ್ತ ಶಿಕ್ಷಕ ಚನ್ನವೀರೇಗೌಡ, ರಾಂಪುರ ಗ್ರಾ.ಪಂ. ಅಧ್ಯಕ್ಷ ಯೋಗಲಿಂಗು, ಡಿಎಸ್ಎಸ್ ಸಂಘಟನೆ ವೆಂಕಟೇಶ್, ಡಾ.ರಾಜ್ ಕಲಾಬಳಗದ ಅಧ್ಯಕ್ಷ ಎಲೇಕೇರಿ ಮಂಜುನಾಥ್, ವೇದಿಕೆ ಪದಾಧಿಕಾರಿಗಳಾದ ರಂಜಿತ್ ಗೌಡ, ಚಾಮರಾಜನಗರ ಮಲ್ಲು, ಮೋಹನ್, ಮಂಗಳವಾರಪೇಟೆ ತಿಮ್ಮರಾಜು, ಬೋರೇಗೌಡ, ಲೋಕೇಶ್, ನಂದೀಶ್, ವೆಂಕಟೇಶ್, ರೈತ ಸಂಘದ ಪದಾಧಿಕಾರಿಗಳು, ಸ್ವಾಭಿಮಾನಿ ವಿಶೇಷ ಚೇತನ ಸಂಘದ ಪದಾಧಿಕಾರಿಗಳು, ಆಟೊ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.