ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಲೂರು: ಮಕ್ಕಳ ಗ್ರಾಮ ಸಭೆ

Published 1 ಜನವರಿ 2024, 14:30 IST
Last Updated 1 ಜನವರಿ 2024, 14:30 IST
ಅಕ್ಷರ ಗಾತ್ರ

ಕುದೂರು: ಸೋಲೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ 2023-24ನೇ ಸಾಲಿನ ಗ್ರಾಮ ಸಭೆ ಮತ್ತು ಮಕ್ಕಳ ಸಭೆಯಲ್ಲಿ ನಡೆಯಿತು.

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುಜಾಯಿದ್ ಪಾಷಾ ಮಾತನಾಡಿ, ಸೋಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಶಾಲೆಗಳ ಶೌಚ ಗೃಹಗಳನ್ನು ಸ್ವಚ್ಛಗೊಳಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚೆಗೆ ವಸತಿ ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದನ್ನು ಮಾಧ್ಯಮಗಳಲ್ಲಿ ಓದಿದ್ದೇವೆ. ಆ ರೀತಿ ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ರೀತಿ ಆಗಬಾರದು ಎಂಬ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳ ಶೌಚಗೃಹಗಳನ್ನು 15 ದಿನಗಳಿಗೊಮ್ಮೆ ಸ್ವಚ್ಛಗೊಳಿಸಿ ಕೊಡಲಾಗುವುದು. ಶಾಲೆಗಳಿಗೆ ಕುಡಿಯುವ ನೀರು, ವಿದ್ಯಾಭ್ಯಾಸ ಮಾಡಲು ಉತ್ತಮ ವಾತಾವರಣ ನಿರ್ಮಿಸಿಕೊಡಲು ಪಂಚಾಯಿತಿ ಬದ್ಧವಾಗಿದೆ ಎಂದರು.

ಶಿಕ್ಷಣ ಇಲಾಖೆಯ ಸಿಎಂಸಿ ಅಧಿಕಾರಿ ಮಂಜುನಾಥ್ ಮಾತನಾಡಿ, ಪಂಚಾಯಿತಿ ಮಟ್ಟದ ಗ್ರಂಥಾಲಯವನ್ನು ಮಕ್ಕಳು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು. ಸಮಾಜಮುಖಿಯಾಗಿ ಬೆಳೆದು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಪಿಡಿಒ ಬೆಟ್ಟಸ್ವಾಮಿ ಮಾತನಾಡಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ನೈರ್ಮಲ್ಯ, ಸ್ವಚ್ಛತೆಗೆ ಪಂಚಾಯಿತಿ ಒತ್ತು ನೀಡಲಾಗುತ್ತಿದೆ. ಪಂಚಾಯಿತಿಯೊಂದಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಸಂವಿಧಾನಾತ್ಮಕ ಹಕ್ಕುಗಳು, ಆರೋಗ್ಯ ಸುರಕ್ಷತೆ, ಬಾಲ್ಯವಿವಾಹ ತಡೆ, ಅಪೌಷ್ಟಿಕತೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಅರಿವು ಮೂಡಿಸಲಾಯಿತು.

ಜ್ಯೋತಿ, ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮೀ, ಸದಸ್ಯರಾದ ಅನುಸೂಯಮ್ಮ, ಬಸಪ್ಪಾಜಿ, ಬೀರೇಶ್, ಗಿರಿಜಮ್ಮ, ಗಂಗರಾಜು, ಕಮಲಮ್ಮ, ಮುನಿಕೃಷ್ಣ, ಲೀಲಾವತಿ, ಸಂತೋಷ್ ಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್.ಕೃಷ್ಣಪ್ಪ, ಸಹಾಯಕಿ ಕಮಲಾಕ್ಷಿ ಸುರೇಶ್, ಸೌಮ್ಯ, ಶಂಕರ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT