ನರೇಗಾ: ರಾಮನಗರ ಜಿ.ಪಂ. ಸಿಇಒ, ಸಿಬ್ಬಂದಿಗೆ ಪ್ರಶಸ್ತಿ ಪ್ರಕಟ

ರಾಮನಗರ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು 2021-22ನೇ ಸಾಲಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ಪುರಸ್ಕಾರ
ನೀಡಿದೆ.
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಭಾಗದಲ್ಲಿ ರಾಮನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಮ್ಮದ್ ಇಕ್ರಂ ಶರೀಫ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಹಾಯಕ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಭಾಗದಲ್ಲಿ ಬಿ. ಜಗದೀಪ್, ತಾಲ್ಲೂಕು ತಾಂತ್ರಿಕ ವಿಭಾಗದಲ್ಲಿ ರಾಮನಗರ ತಾಲ್ಲೂಕು ತಾಂತ್ರಿಕ ಸಂಯೋಜಕ ಕಾರ್ತಿಕ್ ಕುಮಾರ್, ತಾಂತ್ರಿಕ ಸಹಾಯಕ ಎಂಜಿನಿಯರ್ ವಿಭಾಗದಲ್ಲಿ ಮಾಗಡಿ ತಾಲ್ಲೂಕಿನ ಸಚಿನ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಭಾಗದಲ್ಲಿ ಕನಕಪುರ ತಾಲ್ಲೂಕಿನ ಸಾತನೂರು ಗ್ರಾ.ಪಂ. ಪಿಡಿಒ ಕೇಶವಮೂರ್ತಿ, ಬಿ.ಎಫ್.ಟಿ ವಿಭಾಗದಲ್ಲಿ ಕನಕಪುರ ತಾಲೂಕಿನ ರುದ್ರೇಶ್ ಹಾಗೂ ಗ್ರಾಮ ಕಾಯಕ ಮಿತ್ರ ವಿಭಾಗದಲ್ಲಿ ಕನಕಪುರ ತಾಲ್ಲೂಕಿನ ಉಯ್ಯಂಬಳ್ಳಿ ಗ್ರಾಮ ಪಂಚಾಯಿತಿಯ ಜಯಶೀಲಾ ಆಯ್ಕೆಯಾಗಿದ್ದಾರೆ.
ಆಯ್ಕೆಯಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದೇ 14ರಂದು ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡಯಲಿರುವ ‘ನರೇಗಾ ಹಬ್ಬ’ದಲ್ಲಿ ಪ್ರಶಸ್ತಿ ಪಡೆಯಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.