ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಠ್ಯೇತರ ಚಟುವಟಿಕೆಗೂ ಆದ್ಯತೆ: ಚಂದ್ರಶೇಖರ್

Published : 30 ಆಗಸ್ಟ್ 2024, 5:16 IST
Last Updated : 30 ಆಗಸ್ಟ್ 2024, 5:16 IST
ಫಾಲೋ ಮಾಡಿ
Comments

ರಾಮನಗರ: ‘ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ, ಪಠ್ಯೇತರ ಚಟುವಟಿಕೆಗಳು ಅತಿ ಮುಖ್ಯ. ಆ ನಿಟ್ಟಿನಲ್ಲಿ ಎಂ.ಎಚ್. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ದೃಷ್ಟಿಯಿಂದ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಾ ಬಂದಿದೆ. ಅವರಲ್ಲಿರುವ ಪ್ರತಿಭೆಯನ್ನು ಹೊರತರಲು ವೇದಿಕೆ ಒದಗಿಸಿದೆ’ ಎಂದು ಎಂ.ಎಚ್. ಕಾಲೇಜಿನ ಸಂಸ್ಥಾಪಕ ಎಚ್‌.ಸಿ. ಚಂದ್ರಶೇಖರ್ ಹೇಳಿದರು.

ವಿವೇಕಾನಂದ ನಗರದಲ್ಲಿರುವ ಕಾಲೇಜಿನಲ್ಲಿ ಬುಧವಾರ ಪ್ರಥಮ ವರ್ಷದ ಬಿಸಿಎ, ಬಿ.ಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಇಂದಿನ ಸ್ಪರ್ಧಾತ್ಮಕ ಜಗತ್ತನ್ನು ಎದುರಿಸಬೇಕಾದರೆ ಪುಸ್ತಕ ಜ್ಞಾನದೊಂದಿಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಡಾ. ಬಿ.ಎನ್. ಮಹೇಶ್ ಮಾತನಾಡಿ, ‘ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಮಯಪಾಲನೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂರನ್ನು ಪಾಲಿಸದ ಹೊರತು ಯಶಸ್ಸಿನ ಮೆಟ್ಟಿಲು ಹತ್ತಲು ಸಾಧ್ಯವಾಗುವುದಿಲ್ಲ. ಯಾರು ಇವುಗಳನ್ನು ಮೈಗೂಡಿಸಿಕೊಳ್ಳುತ್ತಾರೊ ಅವರು ಭವಿಷ್ಯದಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸುತ್ತಾರೆ’ ಎಂದರು.

ಇದೇ ಸಂದರ್ಭದಲ್ಲಿ ರಮೇಶ್ ಹೊಸದೊಡ್ಡಿ ಬರೆದು, ನಿರ್ದೇಶಿಸಿದ ‘ಶೂಟಿಂಗ್ ರಾಮಾಯಣ’ ಕಿರು ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಅಮಿತಾ ಎಚ್.ಸಿ, ಎಲ್ಲಾ ವಿಭಾಗದ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT