ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ಬಿಸಿಯೂಟ ಸಿಬ್ಬಂದಿ ನಾಳೆ ಪ್ರತಿಭಟನೆ

Published 30 ಜನವರಿ 2024, 16:24 IST
Last Updated 30 ಜನವರಿ 2024, 16:24 IST
ಅಕ್ಷರ ಗಾತ್ರ

ಚನ್ನಪಟ್ಟಣ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆ. 1ರಂದು ಪ್ರತಿಭಟನೆ ನಡೆಸಲಿದ್ದಾರೆ.

ಬಿಸಿಯೂಟ ತಯಾರಿಸುವ ಮಹಿಳೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೇವಲ ಭರವಸೆ ಡುತ್ತಾ ಬಂದಿವೆ. ಆದರೆ ಇಲ್ಲಿಯವರೆಗೂ ಯಾವುದೇ ಭರವಸೆ ಜಾರಿಯಾಗಿಲ್ಲ. ಅಕಾಲಿಕ ಮರಣಕ್ಕೆ ತುತ್ತಾದ ಸಿಬ್ಬಂದಿಗೆ ಪರಿಹಾರ ಒದಗಿಸಿಲ್ಲ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್. ನಿರ್ಮಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ತಿಂಗಳಿಗೆ ವೇತನವನ್ನು ₹6,000ಕ್ಕೆ  ಹೆಚ್ಚಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಆದರೆ, ಮಾಡಲಿಲ್ಲ ಎಂದು ಅವರು ಆರೋಪಿಸಿದರು.

ಬಿಸಿಯೂಟ ತಯಾರಿಸುವ ಸಿಬ್ಬಂದಿ ಕೆಲಸವನ್ನು ಕಾಯಂಗೊಳಿಸಬೇಕು.ಕಡಿಮೆ ವೇತನಕ್ಕೆ ದುಡಿದು ನಿವೃತ್ತಿ ಹೊಂದಿದ ಬಿಸಿಯೂಟ ತಯಾರಿಸುವ ಮಹಿಳಾ ಸಿಬ್ಬಂದಿಗೆ ₹2 ಲಕ್ಷ ಕೊಡಬೇಕು ಎಂದರು.

ಬಿಸಿಯೂಟ ತಯಾರಕರ ಫೆಡರೇಶನ್ ಜಿಲ್ಲಾ ಕಾರ್ಯದರ್ಶಿ ಅನಸೂಯಮ್ಮ, ತಾಲ್ಲೂಕು ಘಟಕದ ಅಧ್ಯಕ್ಷೆ ಸಾಕಮ್ಮ, ಕಾರ್ಯದರ್ಶಿ ಮಂಗಳ, ಉಪಾಧ್ಯಕ್ಷೆ ಶಾಂತಮ್ಮ. ಖಜಾಂಚಿ ಶಶಿಕಲಾ, ಕಾರ್ಯದರ್ಶಿ ಸುನೀತಾ, ಪದಾಧಿಕಾರಿಗಳಾದ ಪೂರ್ಣಿಮಾ, ಪುಷ್ಪಲತಾ, ಶಾರದಮ್ಮ, ಸರಸ್ವತ್ತಮ್ಮ, ಲಲಿತಾ, ಲಕ್ಷ್ಮಿದೇವಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT