ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಲಗನದೊಡ್ಡಿ ಡೇರಿ: ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ

Published 7 ಫೆಬ್ರುವರಿ 2024, 8:01 IST
Last Updated 7 ಫೆಬ್ರುವರಿ 2024, 8:01 IST
ಅಕ್ಷರ ಗಾತ್ರ

ಹಾರೋಹಳ್ಳಿ: ಹೊನ್ನಾಲಗನ ದೊಡ್ಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಜೆಡಿಎಸ್, ಬಿಜೆಪಿ ಬೆಂಬಲಿತ ಎಂ.ಬಸವರಾಜು,  ಉಪಾಧ್ಯಕ್ಷರಾಗಿ ಎಚ್‌.ಆರ್‌.ಅಶೋಕ್ ರಾಜೇ ಅರಸು ಅವಿರೋಧವಾಗಿ ಆಯ್ಕೆಯಾದರು.

ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಸವರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಎಚ್.ಆರ್.ಅಶೋಕ್ ಇಬ್ಬರೇ ನಾಮಪತ್ರ ಸಲ್ಲಿಸಿದ್ದು, ವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ  ಅಧಿಕಾರಿ ಸಹಕಾರ ಇಲಾಖೆಯ ಮಂಜುನಾಥ್ ತಿಳಿಸಿದರು.

ಸಹಾಯಕ ಚುನಾವಣಾ ಅಧಿಕಾರಿಯಾಗಿ ಸಂಘದ ಕಾರ್ಯದರ್ಶಿ, ನಾಗರಾಜು ಕರ್ತವ್ಯ ನಿರ್ವಹಿಸಿದ್ದರು. ಸಂಘದ ನಿರ್ದೇಶಕರಾದ ಚೈತ್ರಾ, ಎಚ್.ಕೆ.ರಾಮಯ್ಯ, ಎಚ್‌.ಎಸ್‌.ರಾಜು, ಮಹಲಿಂಗಯ್ಯ, ಮೋಟಯ್ಯ, ಪುಟ್ಟಸ್ವಾಮಿ, ಸುಜಾತಾ, ಕೆಂಪಮ್ಮ, ಹನುಮಮ್ಮ ಉಪಸ್ಥಿತರಿದ್ದರು. ನೂತನ ಅಧ್ಯಕ್ಷ, ಉಪಾಧ್ಯರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT